dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಯುಕ್ತ ಎನ್. ಶಶಿಕುಮಾರ್ ರವರನ್ನು ರೈಲ್ವೇ ಡಿಐಜಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಹಲವು ವರ್ಷಗಳಿಂದ ಮಂಗಳೂರು ಕಮಿಷನರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಶಿಕುಮಾರ್ ರವರನ್ನು ಧಿಡೀರ್ ಅಂತ ವರ್ಗಾವಣೆ ಮಾಡಲಾಗಿದೆ.

'; } else { echo "Sorry! You are Blocked from seeing the Ads"; } ?>

ಇನ್ನೂ ಮಂಗಳೂರು ನೂತನ ಕಮಿಷನರ್ ಆಗಿ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಕುಮಾರ್ ರವರನ್ನು ಮಂಗಳೂರುನ ನೂತನ ಕಮಿಷನರ್ ಆಗಿ ನೇಮಕ ಮಾಡಲಾಗಿದೆ.

ಶಶಿಕುಮಾರ್ ಸೇರಿದಂತೆ 7 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

'; } else { echo "Sorry! You are Blocked from seeing the Ads"; } ?>

ಬೆಂಗಳೂರು ವೈರ್’ಲೆಸ್ ಎಸ್.ಪಿಯಾಗಿದ್ದ ಡಿ.ಕಿಶೋರ್ ಬಾಬು ಅವರನ್ನು ಗುಪ್ತದಳ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ. ಕೆಎಸ್ ಆರ್’ಪಿ ಬೆಂಗಳೂರು ಕಮಾಂಡೆಂಟ್ ಆಗಿರುವ ಕೆ.ವಂಶಿಕೃಷ್ಣ ಅವರನ್ನು ಬೆಂಗಳೂರು ವೈರ್’ಲೆಸ್ ಎಸ್.ಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಮುಹಮ್ಮದ್ ಸುಜೀತಾ ಎಂ.ಎಸ್. ಅವರನ್ನು ಬೆಂಗಳೂರು ಸಿಎಆರ್ ಡಿಸಿಪಿಯಿಂದ ಬೆಂಗಳೂರು  ದಕ್ಷಿಣ ಸಂಚಾರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಅರುಣಾಂಶುಗಿರಿ ಅವರನ್ನು ಸಿಎಆರ್ ಬೆಂಗಳೂರು ಡಿಸಿಪಿಯಾಗಿ  ವರ್ಗಾವಣೆ ಮಾಡಲಾಗಿದೆ.

ಬೆಳಗಾವಿ ಲೋಕಾಯುಕ್ತ ಎಸ್.ಪಿ. ಯಶೋಧಾ ವಂಟಗೋಡಿ ಅವರನ್ನು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!