';
}
else
{
echo "Sorry! You are Blocked from seeing the Ads";
}
?>
ಕಾರವಾರ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯು ಬೆಳಂಬರದ ತಾಳೇಬೈಲಿ ಗ್ರಾಮದ ಶಿಲ್ಪ ಗೌಡ (17) ಎಂದು ತಿಳಿದು ಬಂದಿದೆ.
ಮಾರ್ಚ್ 9 ರಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ಎರಡು ಪರೀಕ್ಷೆಗಳನ್ನ ಬರೆದಿದ್ದು ಮನೆಯವರು ಎಂದಿನಂತೆ ಕೂಲಿ ಕೆಲಸಕ್ಕೆ ತೆರಳಿದ್ದರು. ಯಾವುದೋ ವಿಷಯಕ್ಕೆ ಮನನೊಂದುಕೊಂಡಿದ್ದ ಶಿಲ್ಪಾ ವಿಷಸೇವಿಸಿದ್ದಾಳೆಂದು ತಿಳಿದು ಬಂದಿದೆ.
ಬಳಿಕ ಮನೆಯಲ್ಲಿ ವಾಂತಿ ಮಾಡಿಕೊಳ್ಳುತ್ತಿದ್ದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ.
ಆಸ್ಪತ್ರೆಗೆ ತೆರಳುವ ಮಾರ್ಗ ಮದ್ಯೆ ಪ್ರಾಣ ಪಕ್ಷಿ ಹಾರಿ ಹೋಗಿದ್ದು ವಿದ್ಯಾರ್ಥಿನಿಯು ಕೊನೆಯುಸಿರೆಳೆದಿದ್ದಾಳೆ.
ಮಗಳನ್ನ ಕಳೆದುಕೊಂಡು ಕಣ್ಣೀರಿಡುತ್ತಿರುವ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಈ ಸಂಬಂಧ ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯೆಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>