ಮೈಸೂರು: ಕರುನಾಡ ಸೇವಕರು ಮೈಸೂರು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಜಂಟಿ ಆಶ್ರಯದಲ್ಲಿ ಲಯನ್ಸ್ ಬ್ಲಡ್ ಸೆಂಟರ್ ಜೀವಧಾರ ಮೈಸೂರು ಸಹಭಾಗಿತ್ವದಲ್ಲಿ ಕರ್ನಾಟಕ ರತ್ನ ಪವರ್ ಸ್ಟಾರ್ ಡಾ| ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 17 ಮಾರ್ಚ್ 2023 ನೇ ಶುಕ್ರವಾರದಂದು ಮೈಸೂರು ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.
ಸಾಮಾಜಿಕ ಕಾರ್ಯಕರ್ತರು, ರಾಜಕೀಯ ಮುಖಂಡರು, ಪೊಲೀಸ್ ಅಧಿಕಾರಿಗಳು ಸೇರಿ ಹಲವು ಗಣ್ಯರು ಭಾಗವಹಿಸಿದ್ದರು. ಕರುನಾಡ ಸೇವ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಸಂಸ್ಥೆಯ ಕಾರ್ಯನಿರ್ವಾಹಕರು ಜೊತೆಗಿದ್ದರು.
ಜೀವದಾನಿಯಾದ 109 ಜನಸ್ನೇಹಿ ರಕ್ತದಾನಿಗಳು.
ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ 109 ಮಂದಿ ದಾನಿಗಳು ಆಗಮಿಸಿ ರಕ್ತದಾನ ಮೆರೆದರು.
ರಕ್ತದಾನ ಮಾಡಿ ಮಾನವೀಯತೆ ಮೆರೆದ ಸರ್ವ ಸಹೃದಯೀ ರಕ್ತ ದಾನಿಗಳಿಗೂ,ರಕ್ತನಿಧಿ ಸಿಬ್ಬಂದಿ ವರ್ಗಕ್ಕೂ, ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸಿದ ಕರುನಾಡ ಸೇವಕರು ಸಂಸ್ಥೆಯ ಎಲ್ಲಾ ಪದಾಧಿಕಾರಿಗಳಿಗೂ, ಮೈಸೂರು ವಲಯದ ಸಂಸ್ಥೆಯ ಕಾರ್ಯ ನಿರ್ವಾಹಕ ಸಲ್ಮಾನ್ ಪಾಷಾ ಮೈಸೂರು ಅವರಿಗೂ, ಮಾದ್ಯಮ ವರದಿಗಾರರಿಗೂ, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಪರವಾಗಿ ಧನ್ಯವಾದ ಸಲ್ಲಿಸಲಾಯಿತು.
ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ರವರು ಮಾಡಿದ ಸಮಾಜ ಸೇವೆಗಳನ್ನು ಈ ಸಂದರ್ಭದಲ್ಲಿ ನೆನಪಿಸಲಾಯಿತು. ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಪರವಾಗಿ ಅನ್ನದಾನ ಕಾರ್ಯಕ್ರಮವು ನಡೆಯಿತು.