';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ನಾಗರಹಾವು ಕಡಿತಕ್ಕೊಳಗಾದ ಹೆತ್ತ ತಾಯಿಯ ಅಮೂಲ್ಯ ಜೀವವನ್ನು ಮಗಳು ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ.
ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ರೇಂಜರ್ ವಿದ್ಯಾರ್ಥಿನಿ ಶ್ರಮ್ಯ ರೈ ತಮ್ಮ ತಾಯಿಯಾದ ಕೆಯ್ಯೂರು ಗ್ರಾಮ ಪಂಚಾಯತಿ ಸದಸ್ಯೆ ಮಮತ ರೈ ಎಂಬುವರಿಗೆ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಹಾವೊಂದು ಕಚ್ಚಿತ್ತು.
ಈ ವೇಳೆ ಸಮಯ ಪ್ರಜ್ಞೆಯಿಂದ ಘಟನಾ ಸ್ಥಳಕ್ಕೆ ಧಾವಿಸಿ, ಕಾಲಿಗೆ ಕಚ್ಚಿದ ಹಾವಿನ ವಿಷವನ್ನು ಬಾಯಿಯಲ್ಲಿ ಕಚ್ಚಿ ತೆಗೆದು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ ಎಂದು ವರದಿ ತಿಳಿಸಿದೆ.
ಕೂಡಲೇ ಸ್ಥಳೀಯ ಆಸ್ಪತ್ರೆಗೆ ತಾಯಿಯನ್ನು ಕರೆದೊಯ್ದು ದಾಖಲಿಸಿ, ಚಿಕಿತ್ಸೆ ನೀಡಲಾಗಿದ್ದು, ಮಗಳ ಧೈರ್ಯವನ್ನು ಸ್ಥಳೀಯರು ಮೆಚ್ಚಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈಕೆಯ ಕಾರ್ಯಕ್ಕೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಗಳು ಅಭಿನಂದನೆ ಸಲ್ಲಿಸಿವೆ.