ಬೆಂಗಳೂರು: ಮುಂದಿನ ಎರಡು -ಮೂರು ದಿನಗಳಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಿಗದಿಯಂತೆ ಇಂದು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮೊದಲ ಪಟ್ಟಿ ಬಿಡುಗಡೆ ಆಗಬೇಕಿತ್ತು . ಮಾಧ್ಯಮಗಳ ಜೊತೆ ಮಾತನಾಡಿರುವ ಡಿ.ಕೆ.ಶಿವಕುಮಾರ್ .. ಇಂದು ಮೊದಲ ಪಟ್ಟಿ ಬಿಡುಗಡೆ ಇಲ್ಲ. ಎಐಸಿಸಿ ಅಧ್ಯಕ್ಷರು ಹಾಗೂ ಜನರಲ್ ಸೆಕ್ರೆಟರಿ ಇಲ್ಲೇ ಇದ್ದಾರೆ . ಎರಡು -ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಅಂತಾ ತಿಳಿಸದರು .
‘ ಕಾಂಗ್ರೆಸ್ ಗ್ಯಾರಂಟಿ ‘ ಭರವಸೆಗಳಿಗೆ ನಾವು ಜವಾಬ್ದಾರಿ. ಬಿಜೆಪಿಯವರ ಪ್ರಣಾಳಿಕೆ ಬರಲಿದೆ ಏನ್ ಮಾಡ್ತಾರೋ ನೋಡೋಣ . 10 ಲಕ್ಷ ಅಕೌಂಟ್ ಗೆ ಹಾಡ್ತೀವಿ ಅಂತಾ ಈ ಹಿಂದೆ ಹೇಳಿದ್ರು ಹಾಕಿದ್ದಾರಾ ? ಎಂದು ಪ್ರಶ್ನೆ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯವಾಗಿ ಅನೇಕ ಏಳು ಬೀಳುಗಳನ್ನು ಕಂಡಿರುವ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ವಿವಿಧ ಪಕ್ಷಗಳಿಂದ ಯಾರು ಅಭ್ಯರ್ಥಿಗಳಾಗುತ್ತಾರೆ?
ಬಿಜೆಪಿಯಿಂದ ಸಂಜೀವ ಮಠಂದೂರು ಹಾಗೂ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಪುತ್ತೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು. 2018ರಲ್ಲಿ ಪುತ್ತಿಲ’ರಿಗೆ ಟಿಕೆಟ್ ಸಿಗಬಹುದೆಂಬ ನಿರೀಕ್ಷೆ ಇತ್ತಾದರೂ, ಬಿಜೆಪಿ ಮಠಂದೂರಿಗೆ ಮಣೆ ಹಾಕಿತ್ತು.
2018ರಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವೇನು?
2018 ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ಬಿಜೆಪಿಯ ಸಂಜೀವ ಮಠಂದೂರು 90,073 ಮತಗಳನ್ನು ಗಳಿಸಿದ್ದರು.
ಇನ್ನು ಕಾಂಗ್ರೆಸ್ ಅಭ್ಯರ್ಥಿ ಯಾರಾಗ್ತಾರೆ ಎಂದು ನೋಡುವುದಾದರೆ ಮಾಜಿ ಶಾಸಕಿಯಾಗಿರುವ ಶಕುಂತಲಾ ಶೆಟ್ಟಿ, ಕಾವು ಹೇಮನಾಥ್ ಶೆಟ್ಟಿ ಹಾಗೂ ಉದ್ಯಮಿ ಅಶೋಕ್ ರೈ ಹೆಸರು ಮುಂಚೂನಿಯಲ್ಲಿದೆ.
ಶಕುಂತಲೀ ಶೆಟ್ಟಿ ಇವರ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿದೆ ಹೀಗಾಗೇ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಅವರು ಗೆಲುವು ಸಾಧಿಸಿದ್ದರು. ಈ ಬಾರಿಯೂ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಕಾವು ಹೇಮನಾಥ್ ಶೆಟ್ಟಿ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದವರು. ಪ್ರತಿ ಬಾರಿ ಟಿಕೆಟ್ ಸಿಗುವ ನಿರೀಕ್ಷೆ ಇದ್ದರೂ ಕೊನೆಯ ಕ್ಷಣದಲ್ಲಿ ಕೈತಪ್ಪುತ್ತಿತ್ತು. ಈ ಬಾರಿಯೂ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಅಶೋಕ್ ರೈ: ಉದ್ಯಮಿ ಆಗಿರುವ ಅಶೋಕ್ ರೈ ಸಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಇವರು ಡಿ. ವಿ. ಸದಾನಂದ ಗೌಡ ಅವರ ಆಪ್ತರೂ ಆಗಿದ್ದಾರೆ. ಇತ್ತೀಚೆಗಷ್ಚೇ ಕಾಂಗ್ರೆಸ್ ಸೇರಿದ ಅಶೋಕ್ ರೈ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.