ಬೆಂಗಳೂರು: ಹೈ ಕೋರ್ಟ್ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಕೆ.ಪಿ.ಸಿ.ಸಿ ಕಚೇರಿ ಮುಂಬಾಗದಲ್ಲಿರುವ ಗಾಂಧಿ ಪ್ರತಿಮೆ ಮುಂಬಾಗ ಪ್ರತಿಭಟನೆ ನಡೆಸುತ್ತಿದ್ದಾರೆ.


ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಪ್ರತಿಭಟನೆಗೆ ಸಾಥ್ ನೀಡುತ್ತಿದ್ದಾರೆ.
ಇನ್ನು ಕಾರ್ಯಕ್ರಮವನ್ನುದ್ದೇಶಿಸಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ವಿಶ್ವ ರವರು ಮಾತನಾಡಿ ಇದು ಸಂವಿಧಾನಕ್ಕೆ ನೀಡಿದ ಕೊಡಲಿಯೇಟು ಎಂದು ಆಕ್ರೋಶ ಭರಿತರಾಗಿ ಮಾತನಾಡಿದರು.
ನಮ್ಮ ನಾಯಕ ರಾಹುಲ್ ಗಾಂಧಿ ಸಾರ್ವರ್ಕರ್ ಸಂತತಿ ಅಲ್ಲ ಆತ ನೈಜ ಗಾಂಧಿ ಕುಡಿ ಅದಕ್ಕಾಗಿ ಮೋದಿ ವಿರುದ್ಧ ಮಾತನಾಡಿದಕ್ಕೆ ಅವರ ವಿರುದ್ಧ ತೀರ್ಪು ಪ್ರಕಟಿಸಿದ್ದಾರೆ ಇದು ಮೋದಿಯ ಚೇಲಾಗಳ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ ಮತ್ತು ಮೋದಿಯ ವಿರುದ್ಧ ನೂರಾರು ಯುವ ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
