dtvkannada

'; } else { echo "Sorry! You are Blocked from seeing the Ads"; } ?>

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಕೇರಳದ ವಯನಾಡ್‌ ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ.

ಮಾನನಷ್ಟ ಪ್ರಕರಣ ಸಂಬಂಧ ಸೂರತ್‌ ಕೋರ್ಟ್‌ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್‌ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ಭಾಷಣ ಮಾಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹೇಳಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

'; } else { echo "Sorry! You are Blocked from seeing the Ads"; } ?>

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು

ಜನಪ್ರತಿನಿಧಿಗಳ ಕಾಯ್ದೆ ಏನು ಹೇಳುತ್ತದೆ?
ಜನಪ್ರತಿನಿಧಿಗಳ ಕಾಯ್ದೆಯಂತೆ ಶಾಸಕರು/ ಸಂಸದರು ಎರಡು ನಿದರ್ಶನಗಳಲ್ಲಿ ತಮ್ಮ ಸ್ಥಾನದಿಂದ ಅನರ್ಹರಾಗಬಹುದು. ಮೊದಲು ಸೆಕ್ಷನ್ 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಪರಾಧ ಮತ್ತು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಅಥವಾ ಸೆಕ್ಷನ್ 171E (ಲಂಚ ತೆಗೆದುಕೊಳ್ಳುವುದು)ನಂತಹ ಪ್ರಕರಣ ಅಥವಾ ಸೆಕ್ಷನ್ 171F (ಚುನಾವಣೆಯಲ್ಲಿ ಅನಗತ್ಯ ಪ್ರಭಾವದ) ಅಪರಾಧ ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾದರೆ ತಮ್ಮ ಸ್ಥಾನವನ್ನು ಸಂಸದರು ಕಳೆದುಕೊಳ್ಳಲಿದ್ದಾರೆ.

ಶಾಸಕರು ಅಥವಾ ಸಂಸದರು ಯಾವುದೇ ಇತರ ಅಪರಾಧ ಪ್ರಕರಣಗಳಲ್ಲಿ ಎರಡು ವರ್ಷ ಅಥವಾ ಎರಡು ವರ್ಷಕ್ಕಿಂತ ಹೆಚ್ಚು ಶಿಕ್ಷೆಗೆ ಒಳಗಾಗಿದ್ದಾರೆ ಅವರನ್ನು ಶಾಸಕ/ ಸಂಸದ ಸ್ಥಾನದಿಂದ ಅನರ್ಹಗೊಳಿಸಬಹುದು. ರಾಹುಲ್‌ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆಯಾದ ಕಾರಣ ಈಗ ಈ ಕಾಯ್ದೆಯ ಅಡಿ ಅನರ್ಹ ಮಾಡಲಾಗಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!