dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೊಸ ನಿರ್ಧಾರ ಕೈಗೊಳಲಾಗಿದ್ದು, ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಎರಡು ಬೃಹತ್ ಸಮುದಾಯಗಳನ್ನು ಸೆಳೆಯುವ ತಂತ್ರಗಾರಿಕೆಯನ್ನು ಸರ್ಕಾರ ಮಾಡಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಂಜೆ ನಡೆದ ಈ ಸಭೆಯನ್ನು ಪ್ರಸಕ್ತ ವಿಧಾನಸಭೆ ಅವಧಿಯ ಬಹುತೇಕ ಕೊನೆಯ ಸಚಿವ ಸಂಪುಟ ಸಭೆ ಎಂದೇ ಪರಿಗಣಿಸಲಾಗಿದೆ. ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸ್ವಾತಂತ್ರ್ಯ ಬಂದ ನಂತರ ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ. ಕಾಲಕಾಲಕ್ಕೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಹಲವು ಸಮಿತಿಗಳನ್ನು ರಚಿಸಲಾಗಿದೆ, ಆದರೆ, ನಂತರ ಅವುಗಳ ಶಿಫಾರಸನ್ನು ಜಾರಿಮಾಡಿರಲಿಲ್ಲ. ಹಲವಾರು ವರದಿಗಳ ಜಾರಿಗೆ ಸರ್ಕಾರಗಳು ಮುಂದಾಗಿರಲಿಲ್ಲ. ಜೇನುಗೂಡಿಗೆ ಕೈಹಾಕಿದಂತೆ ಎಂದು ಸರ್ಕಾರಗಳು ಸುಮ್ಮನಾಗುತ್ತಿದ್ದವು. ಆದರೆ ನಾವು ಎಸ್​ಸಿ ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.

'; } else { echo "Sorry! You are Blocked from seeing the Ads"; } ?>

ಬ್ರಿಟಿಷರ ಕಾಲ, ಮಹಾರಾಜರ ಕಾಲದ ದಾಖಲೆ ಪರಿಶೀಲಿಸಿದ್ದೇವೆ. ಬಂಜಾರ, ಬೋವಿ ಸಮುದಾಯವನ್ನು ಎಸ್​ಸಿಯಿಂದ ಹೊರಗಿಡಲಾಗಲ್ಲ. ಎಲ್ಲಾ ದಾಖಲೆ ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ. ಎಸ್​ಟಿ ಸಮುದಾಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲಾಗುತ್ತದೆ. ಆರ್ಟಿಕಲ್​ 342 ಅನ್ವಯ 4 ಗುಂಪುಗಳಲ್ಲಿ ವರ್ಗೀಕರಣ ಮಾಡಿದ್ದರು. ಈ ಪೈಕಿ ಗುಂಪು ಒಂದು ಆದಿಜಾಂಬವ ಸಮುದಾಯಕ್ಕೆ ಶೇ 6ರಷ್ಟು ಮೀಸಲಾತಿ, ‘ಗುಂಪು 2’ ಆದಿಕರ್ನಾಟಕ ಸಮುದಾಯಕ್ಕೆ ಶೇ 5.5ರಷ್ಟು ಮೀಸಲಾತಿ, ಗುಂಪು 3 ಬಂಜಾರ, ಬೋವಿ, ಕೊರಚರಿಗೆ ಶೇ 4.5ರಷ್ಟು ಮೀಸಲಾತಿ, ಗುಂಪು 4ರಲ್ಲಿರುವ ಮತ್ತಿತರರಿಗೆ ಶೇ.1ರಷ್ಟು ಮೀಸಲಾತಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೊಮ್ಮಾಯಿ ಮಾಹಿತಿ ನೀಡಿದರು.

ಕಾಡುಕುರುಬ, ಜೇನುಕುರುಬರನ್ನು ಎಸ್​​ಟಿಗೆ ಸೇರಿಸಬೇಕೆಂಬ ವಿಚಾರವಾಗಿ ಮೈಸೂರು ವಿವಿ ಸಮಿತಿ ನಿನ್ನೆಯಷ್ಟೇ ಸರ್ಕಾರಕ್ಕೆ ವರದಿ ನೀಡಿದೆ. ಈ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

2ಸಿ, 2ಡಿ ಅಡಿ ಒಕ್ಕಲಿಗ, ಲಿಂಗಾಯತರಿಗೆ ಮೀಸಲಾತಿ:
ಹಿಂದುಳಿದ ವರ್ಗದಲ್ಲಿ ಒಂದೇ ಕೆಟಗರಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರಿಗೆ 7 ರಾಜ್ಯಗಳಲ್ಲಿ ಒಬಿಸಿ ಮೀಸಲಾತಿ ಇಲ್ಲ. 2ಬಿ ಅಡಿ ಮೀಸಲಾತಿ ನೀಡಿಲ್ಲ. 2C ಅಡಿ ಒಕ್ಕಲಿಗರಿಗೆ ಶೇಕಡಾ 6ರಷ್ಟು ಮೀಸಲಾತಿ ಹಾಗೂ 2D ಅಡಿ ಲಿಂಗಾಯತರಿಗೆ ಶೇಕಡಾ 7ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ತಿಳಿಸಿದರು.

ಎಸ್​​ಸಿಎಸ್​​ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಈಗ ಅದು ಅನುಷ್ಠಾನ ಹಂತದಲ್ಲಿ ಇದೆ. ನೇಮಕಾತಿ, ಬಡ್ತಿ ಇದೇ ಆಧಾರದಲ್ಲಿ ಆಗುತ್ತಿದೆ. 9 ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡಿದ್ದೇವೆ. ಒಳಮೀಸಲಾತಿ ಬಗ್ಗೆ ಕ್ಯಾಬಿನೆಟ್ ಉಪ ಸಮಿತಿ ಸಹ ರಚನೆ ಮಾಡಲಾಗಿತ್ತು. ಎಸ್​​ಸಿ ಮೀಸಲಾತಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಆರ್ಟಿಕಲ್ 341 (2) ಅನ್ವಯ ನಾಲ್ಕು ಗುಂಪುಗಳಾಗಿ ವರ್ಗೀಕರಣ ಮಾಡಲಾಗಿದೆ. ಎಸ್​ಸಿ ಲೆಫ್ಟ್ – 6,‌ ಎಸ್​​ಸಿ ರೈಟ್ – 5.5, ಸ್ಪರ್ಶ – 4.5 ಹಾಗೂ ಇತರರಿಗೆ 1 ಮೀಸಲಾತಿ ಶಿಫಾರಸ್ಸು ಮಾಡಲು ಸಂಪುಟ ಸಮ್ಮತಿಸಿದೆ ಎಂದು ಅವರು ಮಾಹಿತಿ ನೀಡಿದರು.

ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ನೀಡುವ ವಿಷಯಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಯಥಾಸ್ಥಿತಿ ಮಧ್ಯಂತರ ಆದೇಶವನ್ನು ಗುರುವಾರ ತೆರವುಗೊಳಿಸಲಾಗಿತ್ತು. ಇದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರ ನಿರಾಳವಾಗಿತ್ತು. 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ಹೈಕೋರ್ಟ್​ಗೆ ತಿಳಿಸಿದ್ದರು. ಈ ಭರವಸೆ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿತ್ತು.

ಮುಸ್ಲಿಮರ ಶೇ 4ರ ಮೀಸಲಾತಿ ರದ್ದು; ಅಲ್ಪಸಂಖ್ಯಾತರಿಗೆ ಇಡಬ್ಲ್ಯುಎಸ್​ ಅಡಿ ಮೀಸಲಾತಿ

2ಸಿ, 2ಡಿ ಹೊಸ ಪ್ರವರ್ಗ ಸೃಷ್ಟಿಗೆ ಮುಂದಾಗಿರುವ ರಾಜ್ಯ ಸರ್ಕಾರ ಅದಕ್ಕಾಗಿ ಮುಸ್ಲಿಂ ಸಮುದಾಯಕ್ಕೆ 2ಬಿ ಅಡಿಯಲ್ಲಿ ನೀಡಲಾಗುತ್ತಿದ್ದ ಶೇ 4ರ ಮೀಸಲಾತಿ ರದ್ದು ಮಾಡಿದೆ. ಇದಕ್ಕೆ ಪ್ರತಿಯಾಗಿ ಮುಸ್ಲಿಂ ಸಮುದಾಯವನ್ನು ಆರ್ಥಿಕವಾಗಿ ಹಿಂದುಳಿದ ವರ್ಗದ (EWS) ಅಡಿ ಪರಿಗಣಿಸಲು ನಿರ್ಧರಿಸಿದೆ. ಬಳಿಕ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ತಲಾ ಶೇ 2ರ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿದೆ

ಮೀಸಲಾತಿ ಎಂದರೇನು?ಮೀಸಲಾತಿ ಎಂಬ ಪದ ಪ್ರಯೋಗವೇ ತಪ್ಪು! ಸಂವಿಧಾನದಲ್ಲಿ ಇದಕ್ಕಾಗಿ ಬಳಸಿರುವ ಪದ ಪ್ರಾತಿನಿಧ್ಯ. ವೈಯಕ್ತಿಕ ನೆಲೆಗಟ್ಟಿನಲ್ಲಿ ಇದನ್ಯಾರಿಗು ನೀಡಲಾಗಿಲ್ಲ. ವೈಯಕ್ತಿಕವಾಗಿ ನೀಡಿರುವುದು ಅವರು ಪ್ರತಿನಿಧಿಸುವ ಶೋಷಿತ ಸಮುದಾಯಗಳ ಕಾರಣಕ್ಕೆ ಮಾತ್ರ. ಈ ಅವಕಾಶವನ್ನು ಪಡೆದವರು ತಮ್ಮ ಸಮುದಾಯದ ಇತರೇ ಜನರಿಗೆ ಸಹಾಯಕವಾಗಲೆಂಬ ಕಾರಣದಿಂದ.

ಮೀಸಲಾತಿ ಏಕೆ?: ಸಮುದಾಯಗಳ ನಡುವಿನ ತಾರತಮ್ಯ ಹೋಗಲಾಡಿಸಿ, ಅವಕಾಶ ವಂಚಿತ ಸಮುದಾಯಗಳಿಗೆ ಸಹಾಯ ಮಾಡುವುದು ಮೀಸಲಾತಿಯ ಉದ್ದೇಶ. ಸಮಾಜದ ಹಲವಾರು ಸಮುದಾಯಗಳು ಅಸ್ಪೃಶ್ಯತೆಯ ಕಾರಣದಿಂದಾಗಿ ಶಿಕ್ಷಣದ ಹಕ್ಕು, ಸಂಪತ್ತಿನ ಹಕ್ಕು, ವ್ಯಾಪಾರದ ಹಕ್ಕು ಸೇರಿದಂತೆ ಅನೇಕ ನಾಗರಿಕ ಹಕ್ಕುಗಳಿಂದ ವಂಚಿತವಾಗಿವೆ. ಇತಿಹಾಸದಲ್ಲಿನ ಇಂತಹ ತಾರತಮ್ಯಗಳನ್ನು ನಿವಾರಿಸಿ ಭವಿಷ್ಯದಲ್ಲಿ ಅವರ ಹಕ್ಕುಗಳನ್ನು ಸಂರಕ್ಷಿಸಲು ಈ ಮೀಸಲಾತಿಯನ್ನು ಕಲ್ಪಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!