ಬಂಟ್ವಾಳ: ಬಸ್ಸಿನಲ್ಲಿ ಮನೆಗೆ ಹೊರಟಿದ್ದ ಬಾಲಕಿಯೋರ್ವಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಸ್ ನಿವಾರ್ಹಕನನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ನಿವಾಸಿಯಾಗಿದ್ದುಕೊಂಡ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ನಿರ್ವಾಹಕ ದವಾಳ್ ಸಾಬ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿಸಲಾಗಿದೆಯೆಂದು ತಿಳಿದು ಬಂದಿದೆ.
ಸಂತ್ರಸ್ತ ಬಾಲಕಿ ಇಲ್ಲಿನ ಕಲ್ಲಡ್ಕ ವಿದ್ಯಾ ಕೇಂದ್ರವೊಂದರ ವಿದ್ಯಾರ್ಥಿನಿಯಾಗಿದ್ದು, ಶನಿವಾರ ಮಧ್ಯಾಹ್ನದ ವೇಳೆ ಶಾಲೆಯಿಂದ ಮನೆಗೆ ಕಲ್ಲಡ್ಕದಿಂದ ಬಿ.ಸಿ.ರೋಡಿಗೆ ಬರುವ ವೇಳೆ ನಿವಾರ್ಹಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ನೊಂದ ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿರುವ ಬಗ್ಗೆ ವರದಿಯಾಗಿದೆ.
ಕಲ್ಲಡ್ಕದಿಂದ ಬರುವ ವೇಳೆ ಪಾಣೆಮಂಗಳೂರು ಬಸ್ ಸ್ಟಾಪ್ನಲ್ಲಿ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದು ಹೋಗಿದ್ದು ಈ ಸಂದರ್ಭದಲ್ಲಿ ಬಸ್ನ ಒಳಗೆ ನೊಂದ ಬಾಲಕಿ, ಬಸ್ಚಾಲಕ ಮತ್ತು ನಿರ್ವಾಹಕ ಮೂರೇ ಜನ ಇದ್ದ ವೇಳೆ ಈತ ಲೈಗಿಂಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪ್ರಕರಣ ದಾಖಲಾದ ಒಂದು ಗಂಟೆಯ ಒಳಗಾಗಿ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೋಲಿಸ್ ಇನ್ಸ್ ಪೆಕ್ಟರ್ ವಿವೇಕಾನಂದ ನೇತೃತ್ವದಲ್ಲಿ ಬಂಟ್ವಾಳ ನಗರ ಠಾಣಾ ಎಸ್.ಐ. ರಾಮಕೃಷ್ಣ ಅವರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.