dtvkannada

'; } else { echo "Sorry! You are Blocked from seeing the Ads"; } ?>

ಶಿವಮೊಗ್ಗ: ರಾಜ್ಯ ಸರ್ಕಾರ ಕಳೆದ ಎರಡು ದಿನಗಳ ಹಿಂದೆ ಮೀಸಲಾತಿ ಪ್ರಕಟ ಮಾಡಿದ್ದು, ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.

ಸದಾಶಿವ ಆಯೋಗದ ವರದಿಯಿಂದ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಲಿದೆ. ಹೀಗಾಗಿ ಈ ವರದಿ ಜಾರಿಗೊಳಿಸದಂತೆ ಆಗ್ರಹಿಸಿದ್ದಾರೆ. ಅಲ್ಲದೇ ನಗರದ ಮಾಳರಕೇರಿ ಬಡಾವಣೆಯಲ್ಲಿನ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ೃ, ಸಂಸದ ಬಿ.ವೈ ರಾಘವೇಂದ್ರ ಭಾವಚಿತ್ರಕ್ಕೆ ಬೆಂಕಿ ಹಾಕಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹಲ್ಲೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಬಂಜಾರ, ಲಂಬಾಣಿ, ಬೋವಿ, ಕೊರಮ ಕೊರಚ ಸಮುದಾಯದವರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಆದರೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಪರಿಣಾಮ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಶಿಕಾರಿಪುರದಲ್ಲಿ‌ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಏಕಾಏಕಿ ಕಲ್ಲು ತೂರಾಟದಿಂದ ನನಗೆ ನೋವಾಗಿದೆ: ಬಿಎಸ್ ಯಡಿಯೂರಪ್ಪ:

ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ, ಏಕಾಏಕಿ ಕಲ್ಲು ತೂರಾಟದಿಂದ ನನಗೆ ನೋವಾಗಿದೆ ಎಂದಿದ್ದಾರೆ. ತಾಂಡಾ ಅಭಿವೃದ್ಧಿ ನಿಗಮವನ್ನು ನಾನು ಮಾಡಿದ್ದೇನೆ. ತಪ್ಪು ಗ್ರಹಿಕೆಯಿಂದ ಇಂತಹ ಘಟನೆ ನಡೆದಿದೆ ಅಂತಾ ಭಾವಿಸಿದ್ದೇನೆ. ಬಂಜಾರ ಸಮುದಾಯದ ಹಿರಿಯರನ್ನು ಕರೆದು ಮಾತನಾಡುತ್ತೇನೆ. ನಾನು ಮತ್ತು ವಿಜಯೇಂದ್ರ ಇಬ್ಬರೂ ಬಂಜಾರ ಸಮುದಾಯದ ಸಮಸ್ಯೆಗಳ ಚರ್ಚೆಗೆ ಸಿದ್ಧರಿದ್ದೇವೆ. ಯಾವುದೇ ಕಾರಣಕ್ಕೂ ಸಮಾಜಘಾತುಕ ಶಕ್ತಿಗಳ ಮಾತು ಕೇಳಬೇಡಿ. ನಿಮ್ಮ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ. 4 ಬಾರಿ ಸಿಎಂ ಆಗಲು ಬಂಜಾರ ಸಮುದಾಯದವರು ಸಹಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಅಹಿತಕರ ಘಟನೆಗೆ ಅವಕಾಶ ನಿಡಬೇಡಿ. ಬಂಜಾರ ಸಮುದಾಯದವರು ಶಾಂತ ರೀತಿಯಿಂದ ವರ್ತಿಸಬೇಕು. ನಾಳೆ ಅಥವಾ ನಾಡಿದ್ದು ಶಿವಮೊಗ್ಗಕ್ಕೆ ಹೋಗಿ ಘಟನೆಗೆ ಕಾರಣ ಏನೂ ಚರ್ಚಿಸುತ್ತೇನೆ ಎಂದು ಹೇಳಿದರು.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!