';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು : ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮೆರವಣಿಗೆಯಲ್ಲಿ ಕೇಸರಿ ಶಾಲಿನೊಂದಿಗೆ ಸಾವಿರಾರು ಮಂದಿ ಭಾಗಿಯಾದರು.
ಪುತ್ತೂರು ದರ್ಬೆ ಸರ್ಕಲ್’ನಿಂದ ಮಿನಿ ವಿಧಾನಸೌದದ ವರೆಗೆ ಮೆರೆವಣಿಗೆಯ ಮೂಲಕ ತೆರಳಿದ ಪುತ್ತಿಲ, ತಮ್ಮ ಶಕ್ತಿಯನ್ನು ಪ್ರದರ್ಶಿಸಿದ್ದಾರೆ.ನಂತರ ಅವರು ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ದರ್ಬೆಯಲ್ಲಿ ಶಂಖನಾದ, ಕಹಳೆ ಮೊಳಗುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಕೇಸರಿ ಶಾಲು ಧರಿಸಿದ ಸಾವಿರಾರು ಕಾರ್ಯಕರ್ತರು ಶಾಲು ಮೇಲೆತ್ತಿ ಬೀಸುವ ಮೂಲಕ ಅರುಣ್ ಪುತ್ತಿಲ ಅವರಿಗೆ ಸ್ವಾಗತ ಕೋರಿದರು.
ಬ್ಯಾಂಡ್, ವಾದ್ಯದ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಪುತ್ತಿಲ ಅವರಿಗೆ ರಸ್ತೆಯುದ್ದಕ್ಕೂ ಹೂವಿನ ಹಾರ ಹಾಕಲಾಯಿತು.
ದರ್ಬೆ ವೃತ್ತದಿಂದ ಮುಖ್ಯ ರಸ್ತೆಯ ಮೂಲಕ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.