ಪುತ್ತೂರು: ಸಹಪಾಠಿ ಗೆಳತಿಯೊಂದಿಗೆ ಮಾತನಾಡುತ್ತಿದ್ದ ವಿದ್ಯಾರ್ಥಿಯೊಬ್ಬನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಪುತ್ತೂರಿನಲ್ಲಿ ಇದೀಗ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿಯನ್ನು ಪರ್ಲಡ್ಕ ಗೋಲಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್ (20) ಎಂದು ಗುರುತಿಸಲಾಗಿದೆ.
ತನ್ನ ಸಹಪಾಠಿ ಗೆಳತಿಯಾದ ಹಿಂದೂ ಯುವತಿಯೊಂದಿಗೆ ಮಾತನಾಡುತ್ತಿದ್ದ ಎಂದು ಆರೋಪಿಸಿ, ಹಿಂದೂ ಸಂಘಟನೆಯ ಕಾರ್ಯಕರ್ತರು ಯುವಕನನ್ನು ರೂಂ ಒಂದರಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆ ನಡೆಸಿದ ನಂತರ ಪುತ್ತೂರು ಪೊಲೀಸರಿಗೊಪ್ಪಿಸಿದ ಘಟನೆಯು ನಡೆದಿದೆ.
ಘಟನೆಯಿಂದ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಒಂದು ಕಿವಿ ಕೇಳಿಸುತ್ತಿಲ್ಲ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಮುಸ್ಲಿಂ ಯುವ ಪರಿಷತ್ ಖಂಡನೆ:
ಅಮಾಯಕ ಯುವಕನ ಮೇಲೆ ಹಲ್ಲೆ ನಡೆಸಿ, ಚುನಾವಣೆ ಸಂದರ್ಭ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಭಜರಂಗದಳ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕೆಂದು ಅಶ್ರಫ್ ಕಲ್ಲೇಗ ಆಗ್ರಹಿಸಿದರು. ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಲ್ಲಬೇಕೆಂದು ಆಗ್ರಹಿಸಿದರು.