dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ನಮ್ಮ ರಾಜ್ಯದಲ್ಲಿ ನಮ್ಮ ಸರ್ಕಾರ ಇರುವಾಗ ಯಾರೇ ಕೋಮು ಪ್ರಚೋದನೆ ಮಾಡಿದರೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಎಚ್ಚರಿಕೆಯ ಕರೆಯನ್ನು ನೀಡಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆಂದು ಭರವಸೆ ನೀಡಿದ್ದೇವೆ. ಆ ನಿಟ್ಟಿನಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ತಂದಿರುವ ಸಂವಿಧಾನ ವಿರೋಧಿ, ಜನವಿರೋಧಿ ಕಾಯ್ದೆಗಳನ್ನು ಹಿಂಪಡೆಯಲಿದ್ದೇವೆ’ ಎಂದು ಸ್ಪಷ್ಟಪಡಿಸಿದರು.

‘ಹಿಜಾಬ್ ನಿಷೇಧ ಮತ್ತು ಗೋಹತ್ಯೆ ನಿಷೇಧ ಸೇರಿದಂತೆ ರಾಜ್ಯದ ಪ್ರಗತಿಗೆ ಅಡ್ಡಿಯಾಗಿರುವ ಇತರೆ ಕಾನೂನುಗಳನ್ನು ಹಿಂಪಡೆಯಲಿದ್ದೇವೆ. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯ ಇಲ್ಲದಂತೆ ಆಗಿದೆ. ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದ್ದು ಇದಕ್ಕೆ ನಮ್ಮ ಸರಕಾರ ಕಡಿವಾಣ ಹಾಕಲಿದೆ’ ಎಂದು ಅವರು ಎಚ್ಚರಿಕೆಯನ್ನು ಕೊಟ್ಟರು.

‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ವಿಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ. ಆದುದರಿಂದ ಕಾಂಗ್ರೆಸ್ಸೀಕರಣ ಮಾಡಿದರೇ ತಪ್ಪೇನು? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

‘ಸರ್ವ ಜನಾಂಗದ ಶಾಂತಿಯ ತೋಟ’ ಆಗಿರುವ ಕರ್ನಾಟಕ ರಾಜ್ಯದಲ್ಲಿ ಯಾರಾದರೂ ಒಂದು ಶಾಂತಿ ಕದಡಿದರೆ ಅದು ಬಜರಂಗದಳ ಅಥವಾ ಆರೆಸೆಸ್ಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ. ಅಂತಹ ಸಂಘಟನೆಗಳನ್ನು ಸರಕಾರ ಮುಲಾಜಿಲ್ಲದೆ ನಿಷೇಧಿಸುತ್ತದೆ. ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಅವರು ಪಾಕಿಸ್ತಾನಕ್ಕೆ ಹೋಗಬಹುದು’ ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದರು.

‘ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕುವ ಕಾನೂನು ನಮಗೆ ಬೇಕಾಗಿದೆ. ಯಾರೋ ನಾಗಪುರದವರು ಆದೇಶಿಸುವ ಕಾನೂನು ನಮಗೆ ಬೇಕಾಗಿಲ್ಲ. ಬಿಜೆಪಿ ಸರಕಾರದ ಅವಧಿಯಲ್ಲಿ ‘ಪುಣ್ಯಕೋಟಿ’ ಯೋಜನೆ ಪ್ರಾರಂಭ ಆಯಿತು. ಬಿಜೆಪಿ ಶಾಸಕರು ಯಾರು ಒಂದೇ ಒಂದು ಹಸುವನ್ನೂ ದತ್ತು ಪಡೆಯಲಿಲ್ಲ’ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!