';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಳ್ಳುವುದು ಸಾಮಾನ್ಯವಾದ ವಿಚಾರವಾಗಿದೆ. ಆದರೆ ಬಿಹಾರದ ಪಾಟ್ನಾ ಜಿಲ್ಲೆಯ ಕೌರಿಯಾ ಪಂಚಾಯ್ತಿಯ ಬಿಹ್ತಾ ಮಿಡ್ಲ್ ಸ್ಕೂಲ್ ನ ಪ್ರಾಂಶುಪಾಲರು ಮತ್ತು ಶಿಕ್ಷಕಿ ವಿದ್ಯಾರ್ಥಿಗಳ ಎದುರೇ ಹೊಡೆದಾಡಿಕೊಂಡ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಪ್ರಿನ್ಸಿಪಾಲ್ ಮತ್ತು ಶಿಕ್ಷಕಿ ನಡುವೆ ಕ್ಲಾಸ್ ರೂಂನಲ್ಲಿ ವಾಗ್ವಾದ ಆರಂಭಗೊಂಡಿದ್ದು, ನಂತರದಲ್ಲಿ ಶಾಲೆಯ ಆವರಣದ ಹೊರಭಾಗದಲ್ಲಿ ಮಾರಾಮಾರಿ ನಡೆದಿದೆ. ಪ್ರಿನ್ಸಿಪಾಲ್ ಮತ್ತು ಶಿಕ್ಷಕಿಯ ಜಗಳವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಮಿಡ್ಲ್ ಸ್ಕೂಲ್ ಪ್ರಿನ್ಸಿಪಾಲ್ ಕಾಂತಿ ಕುಮಾರಿ ಹಾಗೂ ಶಿಕ್ಷಕಿ ಅನಿತಾ ಕುಮಾರಿ ನಡುವೆ ವೈಯಕ್ತಿಕ ವಿಚಾರದಲ್ಲಿ ಜಗಳ ಆರಂಭವಾಗಿತ್ತು ಎಂದು ವರದಿ ವಿವರಿಸಿದೆ.
ನೆಲದಲ್ಲಿ ಉರುಳಾಡಿ , ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ದೃಶ್ಯ ವಿಡಿಯೋದಲ್ಲಿದೆ.