ಬೆಳ್ತಂಗಡಿ: ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಹೃದಯಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಸಾಲಿಯತ್ (24) ಮೃತ
ಯುವತಿ. ಇವರು ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದು, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೇ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಸಾಲಿಯತ್ ಪಡಗಂಡಿ ಪೊಯ್ಯೋಗುಡ್ಡೆ ನಿವಾಸಿಯಾಗಿದ್ದು, 8 ತಿಂಗಳ ಹಿಂದೆಯಷ್ಟೇ ಚಿಕ್ಕಮಗಳೂರಿನ ಬಣಕಲ್’ಗೆ ಮಾಡಿ ಕೊಡಲಾಗಿತ್ತು.
ಚಿಕ್ಕಮಗಳೂರು ಪತಿ ಮನೆಯಲ್ಲಿದ್ದ ಅವರಿಗೆ ಹೃದಯ ನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಬೆಳ್ತಂಗಡಿ ತಾಲೂಕಿನ ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಯತ್ ಅವರು 8 ತಿಂಗಳ ಹಿಂದೆ ವಿವಾಹವಾಗಿದ್ದರು. ಪತಿಯ ಮನೆ ಚಿಕ್ಕಮಗಳೂರಿನಲ್ಲಿದ್ದು, ಅಲ್ಲಿಯೇ ನೆಲೆಸಿದ್ದರು. ಸಾಲಿಯತ್ ಅವರಿಗೆ ಹೃದಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ, ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಬುಧವಾರ ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.