';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕಡಬ: ವಿದ್ಯುತ್ ಕಂಬದಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ಲೈನ್’ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ದ್ಯಾಮಣ್ಣ ದೊಡ್ಮಣಿ ಎಂದು ಗುರುತಿಸಲಾಗಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಇವರು ಪವರ್ ಮ್ಯಾನ್ ಆಗೆ ಕೆಲಸ ನಿರ್ವಹಿಸುತ್ತಿದ್ದರು. ಇಂದು ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ವಿದ್ಯುತ್ ಕಂಬ ದುರಸ್ತಿ ಕಾರ್ಯ ನಡೆಸುತ್ತಿದ್ದಾಗ ಈ ಅವಘಟ ಸಂಭವಿಸಿದೆ.
ವಿದ್ಯುತ್ ಕಂಬ ಏರಿ ದುರಸ್ತಿ ನಡೆಸುತ್ತಿದ್ದಾಗ ಹಠಾತ್ ವಿದ್ಯುತ್ ಪ್ರವಹಿಸಿದೆ. ಗಂಭೀರ ಗಾಯಗೊಂಡಿದ್ದ ದ್ಯಾಮಣ್ಞ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಚಿರುವುದಾಗಿ ವರದಿಯಾಗಿದೆ.
ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.