dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಕಾಂಗ್ರೆಸ್ ಸರಕಾರ ಘೋಷಿಸಿದ 5 ಗ್ಯಾರೆಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್​ ವಿದ್ಯುತ್​ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್​ ಒಳಗಡೆ ವಿದ್ಯುತ್​ ಬಳಸುತ್ತಾರೆ ಅವರು ಬಿಲ್​ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜುಲೈ ೦೧ ರಿಂದ 200 ಯುನಿಟ್ ಫ್ರೀ ನೀಡಲಿದ್ದೇವೆ ಎಂದು ಘೋಷಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ವಿಚಾರವಾಗಿ ಮಾತನಾಡಿ ಮನೆ ಯಜಮಾನಿಯ ಅಕೌಂಟ್ಗೆ ತಿಂಗಳಿಗೆ 2000 ಸಾವಿರ ರೂ. ಹಾಕುತ್ತವೇ. ಹೀಗಾಗಿ ಅವರು ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆದಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಪಾಸ್ಬುಕ್ ಜರಾಕ್ಸ್ ನೀಡಬೇಕು. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ಧಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್ ಯೋಜನೆ ಜಾರಿ ಬಗ್ಗೆ ವಿವರಿಸಿದರು. 5 ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದ್ದು, ಯಾವುದೇ ಜಾತಿ, ಧರ್ಮ, ಭಾಷೆ ಬೇಧವಿಲ್ಲದೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

'; } else { echo "Sorry! You are Blocked from seeing the Ads"; } ?>

ಗೃಹಲಕ್ಷ್ಮೀ ಯೋಜನೆ

ಮನೆ ಯಜಮಾನಿಗೆ ತಿಂಗಳಿಗೆ 2000 ರೂ. ಜಮಾ ಮಾಡುತ್ತೇವೆ. ಹಾಗಾಗಿ ಈಗ ಅವರು ಅಕೌಂಟ್ ನಂಬರ್, ಆಧಾರ್ ಕಾರ್ಡ್ ಕೊಡಬೇಕು. ಅಲ್ಲದೇ ಇದಕ್ಕೆ ಆನ್ಲೈನ್ ಅರ್ಜಿ ಸಲ್ಲಿಸಬೇಕು. ಜೂನ್ 15ರಿಂದ ಜುಲೈ 15ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬಳಿಕ ದಾಖಲೆಗಳನ್ನು ಪರಿಶೀಲಿಸಿ ಆಗಸ್ಟ್ 15ರಿಂದ ಮನೆ ಯಜಮಾನಿ ಬ್ಯಾಂಕ್ ಖಾತೆಗೆ ಹಣ ಹಾಕಲಾಗುವುದು. ಇದು ಬಿಪಿಎಲ್ ಹಾಗೂ ಎಪಿಲ್ ಕಾರ್ಡುದಾರರಿಗೆ ಅನ್ವಯವಾಗಲಿದೆ ಎಂದರು.

ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವೀಕಲಕರಿಗೆ ಈಗಾಲೇ ಬರುತ್ತಿರುವ ಪಿಂಚಣಿ ಜೊತೆಗೆ ಈ ಎರಡು ಸಾವಿರ ರೂಪಾಯಿ ಮನೆ ಯಜಮಾನಿಗೆ ಸಿಗಲಿದೆ.

ಈಗಾಗಲೇ ತಿಳಿಸಿರುವಂತೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಯನ್ನು ಜೂನ್ 11ರಿಂದ ಆರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅನ್ವಯವಾಗಲಿದೆ. ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದರು.

ಯಾವೆಲ್ಲ ಬಸ್​ಗಳಲ್ಲಿ ಉಚಿತ ಪ್ರಯಾಣ?

  • ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣ
  • ಎಸಿ, ನಾನ್​ ಎಸಿ ಸ್ಲೀಪರ್​ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ
  • ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ
  • ಅಂತಾರಾಜ್ಯ ಪ್ರಯಾಣಕ್ಕಿಲ್ಲ ಉಚಿತ ಸೌಲಭ್ಯ
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!