ಒಡಿಶಾದ ಬಾಲಸೋರ್ನಲ್ಲಿ ರೈಲು ಅಪಘಾತ ಸಂಭವಿಸಿದ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಅಂದಾಜಿನ ಪ್ರಕಾರ ಈ ರೈಲು ದುರಂತದಲ್ಲಿ 261 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ ಘಟನೆ ನಡೆದ ಸ್ಥಳದ ಬಳಿ ಪ್ರಧಾನಿ ಮೋದಿ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ಬಂದಿಳಿದರು. ಅಪಘಾತದಲ್ಲಿ ಗಾಯಗೊಂಡು ರು ಬಾಲಸೋರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರನ್ನೂ ಮೋದಿ ಭೇಟಿ ಮಾಡಲಿದ್ದಾರೆ
ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ.ಶುಕ್ರವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಪ್ಯಾಸೆಂಜರ್ ರೈಲುಗಳ 17 ಬೋಗಿಗಳು ಹಳಿ ತಪ್ಪಿ ತೀವ್ರವಾಗಿ ಹಾನಿಗೀಡಾಗಿವೆ.
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಾಥಮಿಕ ವರದಿಯ ಪ್ರಕಾರ, 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವರದಿಯ ಪ್ರಕಾರ ಸಾವಿನ ಸಂಖ್ಯೆ 238 ರಿಂದ 261 ಕ್ಕೆ ಏರಿದೆ.