dtvkannada

'; } else { echo "Sorry! You are Blocked from seeing the Ads"; } ?>

ಹೈದರಾಬಾದ್: ಇತ್ತಿಚೆಗೆ ಯುವತಿಯರನ್ನು ಕೊಂದು ಬಿಸಾಕುವುದು ಒಂದು ಸಾಮಾನ್ಯ ಚಟುವಟಿಕೆಗಳಲ್ಲಿ ಒಂದಾದಂತಾಗಿದೆ. ಇಲ್ಲೊಬ್ಬ ಎಲ್ಲರಿಗೂ ದಾರಿ ದೀಪವಾಗಬೇಕಾಗಿದ್ದ ಅರ್ಚಕ ಯುವತಿಯನ್ನು ಕೊಲೆಗೈದು ಬಳಿಕ ಶವವನ್ನು ಮ್ಯಾನ್ ಹೋಲ್ ಗೆ ಬಿಸಾಕಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಕೊಲೆಯಾದ ಯುವತಿಯನ್ನು ಕುರುಗಂಟಿ ಅಪ್ಸರಾ ಎಂದು ಗುರುತಿಸಲಾಗಿದ್ದು ಈಕೆಯನ್ನು ಅಯ್ಯಗಿರಿ ವೆಂಕಟ ಸೂರ್ಯ ಸಾಯಿ ಕೃಷ್ಣ (36) ಎಂಬ ಅರ್ಚಕ ಕೊಲೆ ಮಾಡಿದ್ದಾನೆಂದು ತಿಳಿದು ಬಂದಿದೆ.

ಸರೂರ್ ನಗರದ ದೇವಾಲಯದಲ್ಲಿ ಅರ್ಚಕನಾಗಿರುವ ವೆಂಕಟ ಸೂರ್ಯ ಸಾಯಿ ಕೃಷ್ಣನಿಗೆ ಈಗಾಗಲೇ ಮದುವೆಯಾಗಿದೆ. ಈತನು ಅಪ್ಸರಾ ಎಂಬ ಮಹಿಳೆಯ ಜತೆ ಸಂಬಂಧ ಬೆಳೆಸಿದ್ದಾನೆ. ಇಬ್ಬರ ಪ್ರೀತಿ ಗಾಢವಾದ ಮೇಲೆ ನನ್ನನ್ನು ಮದುವೆಯಾಗು ಎಂದು ಅಪ್ಸರಾ ಪಟ್ಟು ಹಿಡಿದಿದ್ದಾರೆ. ಈಗಾಗಲೇ ಮದುವೆಯಾದ ಕಾರಣ ಮತ್ತೊಂದು ಮದುವೆಯಾಗಲು ಒಪ್ಪದ ವೆಂಕಟಸೂರ್ಯ ಸಾಯಿ ಕೃಷ್ಣ, ಆಕೆಯನ್ನು ಕೊಂದು, ಚರಂಡಿಯ ಗುಂಡಿಯಲ್ಲಿ ಎಸೆದಿದ್ದಾನೆ.

ಜೂನ್ 3ರಂದು ರಾತ್ರಿ ಗೋಶಾಲೆಗೆ ಭೇಟಿ ನೀಡೋಣ ಎಂದು ಸೂರ್ಯ ಸಾಯಿ ಕೃಷ್ಣ ಅಪ್ಸರಾ ಅವರನ್ನು ಕರೆಸಿದ್ದಾನೆ. ವೆಂಕಟೇಶ್ವರ ಕಾಲೋನಿ ನಿವಾಸಿಯಾದ ಅಪ್ಸರಾ, ಸೂರ್ಯ ಸಾಯಿ ಕೃಷ್ಣನ ಮಾತು ಕೇಳಿ ಸುಲ್ತಾನ್ ಪಳ್ಳಿಯಲ್ಲಿರುವ ಗೋಶಾಲೆಗೆ ಹೋಗಿದ್ದಾರೆ. ಇದೇ ವೇಳೆ, ನರ್ಕುಡಾ ಗ್ರಾಮದ ಹೊರವಲಯದಲ್ಲಿ ಸೂರ್ಯ ಸಾಯಿ ಕೃಷ್ಣನು ಅಪ್ಸರಾ ತಲೆಮೇಲೆ ಬಂಡೆಗಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಚರಂಡಿ ಗುಂಡಿಯಲ್ಲಿ ಎಸೆದಿದ್ದಾನೆ.

ನಂತರ ಪೊಲೀಸ್ ಠಾಣೆಗೆ ಬಂದು ಅಪ್ಸರಾ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದಾನೆ. ಪ್ರಕರಣ ಸಂಬಂಧ ಸ್ಥಳೀಯ ಸಿಸಿಟಿವಿ ಪರಿಶೀಲನೆ ನಡೆಸಿದ ಪೊಲೀಸರು. ಈ ವೇಳೆ ವ್ಯಕ್ತಿಯೊಬ್ಬ ಶವವನ್ನು ತಂದು ಮ್ಯಾನ್ ಹೋಲ್ ಗೆ ಹಾಕಿರುವುದು ಬಯಲಾಗಿದೆ. ಅಂತೆಯೇ ದೂರು ಕೊಟ್ಟ ಸಾಯಿಕೃಷ್ಣನನ್ನೇ ವಿಚಾರಣೆಗೆ ಒಳಪಡಿಸಿದಾಗ ಆತ ಯುವತಿಯನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!