';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ಇಣುಕಿ ನೋಡುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯ ಮುನ್ನೇಕೊಳಲುನಲ್ಲಿ ನಡೆದಿದೆ. ನಿತಿನ್ ಬಂಧಿತ ಕಾಮುಕ.
ಬಾಡಿಗೆ ಮನೆಯಲ್ಲಿದ್ದ ನಿತಿನ್, ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಕಿಟಕಿಯಲ್ಲಿ ಇಣುಕಿ ನೋಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಬಳಿಕ ಸ್ಥಳೀಯರು ನಿತೀನ್ನನ್ನು ಹಿಡಿದು ಮಾರತ್ಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಮಾರತ್ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.
ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ನಿತಿನ್ ಕಿಟಕಿಯಿಂದ ಆಗಾಗ ನೋಡುತ್ತಿದ್ದ. ಆದ್ರೆ, ಮಹಿಳೆ ಅದನ್ನು ಗಮನಿಸಿಲ್ಲ ಎನ್ನಲಾಗಿದೆ. ಆದ್ರೆ, ಇಂದು ಮತ್ತೆ ಇಣುಕಿ ನೋಡುತ್ತಿದ್ದಾಗ ಮಹಿಳೆ ನೋಡಿ ಕಿರುಚಿಕೊಂಡಿದ್ದಾಳೆ. ಬಳಿಕ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದ್ದು, ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.