ಪುತ್ತೂರು: ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ ಪ್ರತ್ಯೇಕ ಸುಸಜ್ಜಿತ ಕಣ್ಣಿನ ಆಸ್ಪತ್ರೆಯ ಕೊರತೆಯನ್ನು ನೀಗಿಸಲು ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಕೆಳ ಅಂತಸ್ತಿನಲ್ಲಿ ಸೂಪರ್ ಸ್ಪೆಷಾಲಿಸ್ಟ್ ರೋಟರಿ ಕಣ್ಣಿನ ಅಸ್ಪತ್ರೆ ಜೂ. ೨೧ರಂದು ಉದ್ಘಾಟನೆಗೊಂಡಿತ್ತು.
ರೋಟರಿ ಅಂತರಾಷ್ಟ್ರೀಯ ನಿರ್ದೇಶಕ ಮಹೇಶ್ ಅವರು ರೋಟರಿ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದರು.


ಶಾಸಕ ಅಶೋಕ್ ಕುಮಾರ್ ರೈ ದೀಪ ಪ್ರಜ್ವಲಿಸಿದರೆ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಮೊಡಿಲರ್ ಒಟಿಯನ್ನು ಉದ್ಘಾಟಿಸಿದರು. ಅಂತರಾಷ್ಟ್ರೀಯ ರೋಟರಿಯ ಚಯರ್‌ಮ್ಯಾನ್ ರವಿವಡ್ಲಮನಿ ಡೇ ಕೇರ್ ಸೆಂಟರ್ ಉದ್ಘಾಟಿಸಿದರು. ಮಾಜಿ ಶಾಸಕ ಸಂಜೀವ ಮಠಂದೂರು,
ರೋಟರಿ ಪೌಂಡೇಶನ್‌ನ ಚೆಯರ್‌ಮ್ಯಾನ್ ಡಾ. ಕೆ ಸೂರ್ಯನಾರಾಯಣ, ಪ್ರಸಾದ್ ನೇತ್ರಾಲಯದ ಡಾ. ಕೃಷ್ಣ ಪ್ರಸಾದ್ ಕೆ, ರೋಟರಿ ಜಿಲ್ಲಾ ಅಸಿಸ್ಟಂಟ್ ಗವರ್ನರ್ ಎ.ಜಗಜೀವನ್‌ದಾಸ್ ರೈ, ರೋಟರಿ ಕ್ಲಬ್ ಪುತ್ತೂರು ಇದರ ಪ್ರಾಜೆಕ್ಟ್ ಚೇರ್ಮಾನ್ ಡಾ.ಭಾಸ್ಕರ್ ಎಸ್, ರೋಟರಿ ಕ್ಲಬ್ ಅಧ್ಯಕ್ಷ ಉಮಾನಾಥ್ ಪಿ.ಬಿ ಕಾರ್ಯದರ್ಶಿ ಡಾ. ಶ್ರೀಪ್ರಕಾಶ್, ಮಾಜಿ ಅಧ್ಯಕ್ಷ ಜೇವಿಯರ್ ಡಿಸೋಜ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪ್ರೊ ವಿ ಜೆ ಪೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.