dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಕೆಲ ದಿನಗಳ ಹಿಂದೆ ನಡೆದ ಕಾನೂನು ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಕೀಲ ಕೆ ಎಸ್‌ ಎನ್ ರಾಜೇಶ್ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

ಮಂಗಳೂರು ಮಹಿಳಾ ಠಾಣೆಯ ಪೊಲೀಸರು ದಾಖಲಿಸಿದ ಎಫ್‌ಐಆರ್ ಮತ್ತು 3ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ಕೋರಿ ವಕೀಲ ಕೆ.ಎಸ್‌.ಎನ್ ರಾಜೇಶ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ.

ಅತ್ಯಾಚಾರ, ಅತ್ಯಾಚಾರ ಯತ್ನ ಮತ್ತು ಅತ್ಯಾಚಾರಕ್ಕೆ ತಯಾರಿ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣಾ ವೇಳೆಯಲ್ಲಿ ಕಂಡು ಬಂದಿದೆ.

ತನಿಖಾಧಿಕಾರಿಗಳು ವಶಪಡಿಸಿಕೊಂಡ ಸಿಸಿಟಿವಿ ದೃಶ್ಯಾವಳಿಗಳು, ಆರೋಪಿ ಮತ್ತು ದೂರುದಾರರ ನಡುವೆ ನಡೆದ ಮಾತುಕತೆಯ ವೈಜ್ಞಾನಿಕ ವರದಿಗಳು ಮತ್ತು ಘಟನಾ ಸಂದರ್ಭ ಆರೋಪಿಯ ಉದ್ದೇಶ, ಅತ್ಯಾಚಾರಕ್ಕೆ ಯತ್ನ ಮತ್ತು ಅತ್ಯಾಚಾರ ನಡೆದಿದೆಯೋ ಇಲ್ಲಾವೋ ಎಂಬ ವಿಷಯಕ್ಕೆ ಸಾಕ್ಷ್ಯ ವಿಚಾರಣೆ ವೇಳೆ ತಿಳಿಯುವುದೆಂದು ಮತ್ತು ನ್ಯಾಯಾಲಯ ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿದರೆ ಕಾನೂನು ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲಾದಂತಾಗುತ್ತೆ ಜೊತೆಗೆ ವಿದ್ಯಾರ್ಥಿನಿಯ ಮೇಲೆ ನಡೆಸಿದರೆ ಅದು ಆಕೆಯ ವೃತ್ತಿ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಹೀಗಾಗಿ, ವಿಚಾರಣಾಧೀನ ನ್ಯಾಯಾಲಯದ ಸಂಪೂರ್ಣ ವಿಚಾರಣೆ ಎದುರಿಸಿ, ಆರೋಪಿಯು ದೋಷಮುಕ್ತರಾಗಿ ಬರಬೇಕು” ಎಂದು ಅಭೀಪ್ರಾಯಪಟ್ಟ ರಿಟ್ ಅರ್ಜಿಯನ್ನು ತಿರಸ್ಕರಿಸಿದೆ.

ಪ್ರಕರಣದ ಹಿನ್ನೆಲೆ:- ನಗರದ ಕಾನೂನು ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ವಕೀಲ ಕೆ ಎಸ್ ಎನ್. ರಾಜೇಶ್ ಅವರ ಕಚೇರಿಯಲ್ಲಿ ಇಂಟರ್ನ್‌ಶಿಪ್ ಮಾಡುತ್ತಿದ್ದರು.

ಈ ಸಂದರ್ಭ ತನ್ನ ಮೇಲೆ ವಕೀಲ ರಾಜೇಶ್ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿ ದೂರು ನೀಡಿದ್ದರು. ಈ ಸಂಬಂಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಪೊಲೀಸರು ತನಿಖೆ ಪೂರ್ಣಗೊಳಿಸಿ ಅತ್ಯಾಚಾರ, ಲೈಂಗಿಕ ಕಿರುಕುಳ, ಮಹಿಳೆಯ ಘನತೆಗೆ ಧಕ್ಕೆ ತಂದಿರುವುದು ಸೇರಿದಂತೆ ಹಲವು ಆರೋಪಗಳ ಸಂಬಂಧ ಆರೋಪ ಪಟ್ಟಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

ಈ ಮಧ್ಯೆ ಆರೋಪಿ ತಲೆಮರೆಸಿಕೊಂಡಿದ್ದರು. ಕೊನೆಗೆ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಆರೋಪಿಗೆ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದ ಬಗ್ಗೆ ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!