';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ರಾಜ್ಯದ ಹಲವೆಡೆ ಶನಿವಾರವೂ ಮಳೆ ಅಬ್ಬರ ಮುಂದುವರಿದಿದೆ. ಬಾಗಲಕೋಟೆ, ಚಿಕ್ಕಮಗಳೂರು, ಬೆಳಗಾವಿ, ಹಾವೇರಿ, ಕೊಡಗು, ಮಂಡ್ಯ, ಯಾದಗಿರಿ, ದಕಿಷಿಣ ಕನ್ನಡ ಸೇರಿ ಹಲವೆಡೆ ವರುಣಾರ್ಭಟ ಜೋರಾಗಿದೆ.
ಕರಾವಳಿ ಭಾಗಗಳಲ್ಲಿ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನಗಳು ಕಾಲ ಇನ್ನಷ್ಟು ಬಿರುಸುಗೊಳ್ಳಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜುಲೈ 23 ಮತ್ತು 24ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಜುಲೈ 25ರಿಂದ ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಜುಲೈ 24ರಂದು ಹೆಚ್ಚು ಮಳೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನದಲ್ಲಿ ಮುಂದಿನ ನಾಲ್ಕು ದಿನ, ಯಾದಗಿರಿ, ಬೆಳಗಾವಿಯಲ್ಲಿ ಮುಂದಿನ ಎರಡು ದಿನ, ಧಾರವಾಡ ಮತ್ತು ಕಲಬುರಗಿಯಲ್ಲಿ ಜುಲೈ 24ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.