ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ನಡೆದ ಪಾಂಗಳ ಗ್ರಾಮದ ನಿವಾಸಿ ಸೌಜನ್ಯ ಅತ್ಯಾಚಾರಗೈದು ಕೊಲೆ ನಡೆಸಿದ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ತನಿಖಾ ಇಲಾಖಾ ಸಂಸ್ಥೆಯವರು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಒತ್ತಾಯಿಸಿದ್ದಾರೆ.

“ಸೌಜನ್ಯ ಸಾವು ಪ್ರಕರಣ ಪ್ರಸ್ತುತ ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಹಾಗು ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ ಹಾಗೂ ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದಾಗಿ ವಿನಂತಿಸುತ್ತೇನೆ” ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸೌಜನ್ಯ ಅತ್ಯಾಚಾರ ಮತ್ತು ಸಾವಿನ ಹಿಂದೆ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಸ್ಥರ ಕೈವಾಡವಿದೆ ಎಂಬ ಆರೋಪ ಕೇಳಿ ಬರುತ್ತಿರುವ ಕಾರಣ ಕಳೆದ ಕೆಲ ದಿನಗಳ ಹಿಂದೆ ಡಾ.ವೀರೇಂದ್ರ ಹೆಗ್ಗಡೆ ಅವರು ನನ್ನ ವಿರುದ್ಧ ಯಾವುದೇ ಮಾಧ್ಯಮದಗಳಿಂದ ಅವಹೇಳನಕಾರಿ ವರದಿ ಮಾಡದಂತೆ ಮತ್ತು ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಇತ್ತೀಚೆಗೆ ಆದೇಶಿಸಿತ್ತು.