dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಈಗಾಗಲೇ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪುನೀತ್ ಕೆರೆಹಳ್ಳಿಯನ್ನು ಸಿಸಿಬಿ ಅಧಿಕಾರಿಗಳು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ ಘಟನೆ ನಡೆದಿದೆ.

ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಪ್ರಕರಣ ದಾಖಲಿಸಿಕೊಂಡಿದ್ದು ಈ ಕಾಯ್ದೆಯಡಿ ಬಂಧನವಾದರೆ ಒಂದು ವರ್ಷದವರೆಗೆ ಜೈಲು ವಾಸ ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ.

ಕಳೆದ ಒಂದು ತಿಂಗಳಿನಿಂದ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿ ನೋಟಿಸ್ ನೀಡಿ ವಿವರಣೆ ಕೇಳಿದ್ದರು. ಶುಕ್ರವಾರ ತಡರಾತ್ರಿ ಸಿಸಿಬಿ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಪುನೀತ್ ಕೆರೆಹಳ್ಳಿ ಕಳೆದ ಕೆಲ ವರ್ಷಗಳಿಂದ ನಡೆಸಿರುವ ಸಮಾಜ ವಿರೋಧಿ ಕೃತ್ಯಗಳು, ಸಮಾಜದ ಸಾಮರಸ್ಯ ಕದಡಿದ ಪ್ರಕರಣಗಳು ಮತ್ತು ಆತನ ಅಪರಾಧ ಪ್ರಕರಣಗಳನ್ನು ಪರಿಗಣಿಸಿ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪುನೀತ್ ಕೆರೆಹಳ್ಳಿ ಮೂಲತಃ ಹಾಸನ ಜಿಲ್ಲೆಯವನಾದ ಈತ ಸದ್ಯ ಬೆಂಗಳೂರಿನ ಜೆಪಿ ನಗರದಲ್ಲಿ ನೆಲೆಸಿದ್ದು ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯನ್ನು ಕಟ್ಟಿಕೊಂಡು ಜನರನ್ನು ಬೆದರಿಸಿ ಸಮಾಜದ ಶಾಂತಿ ಕದಡಿ ಗೋ ರಕ್ಷಣೆ ಹೆಸರಿನಲ್ಲಿ ದನದ ವ್ಯಾಪಾರಿಗಳನ್ನು ಬೆದರಿಸುತ್ತಿದ್ದ ಎನ್ನುವ ಮಾಹಿತಿಯು ನೀಡಲಾಗಿದೆ.

ಈತನ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ವಿಜಯನಗರದ ಹಂಪಿ ಪ್ರವಾಸಿ ಪೊಲೀಸ್‌ ಠಾಣೆ, ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್ ಠಾಣೆ ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಕೊಲೆ, ಹಲ್ಲೆ, ಜೀವ ಬೆದರಿಕೆ, ದೊಂಬಿ, ಪ್ರಕರಣಗಳು ದಾಖಲಾಗಿವೆ. ಕೆಲ ಸಮಯದ ಹಿಂದೆ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಟ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಪ್ರಕರಣ ಕೂಡ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂದನಕ್ಕೊಳಗಾಗಿದ್ದ ಪುನೀತ್ ಕೆರೆಹಳ್ಳಿ ಬಳಿಕ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಇದೀಗ ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!