ಪುತ್ತೂರು: ನವೆಂಬರ್ 13 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ ಟ್ರಸ್ಟಿನ ಮಹಾಸಭೆ ಹಾಗೂ ಟ್ರಸ್ಟಿನ ಫಲಾನುಭವಿಗಳಿಗೆ ವಸ್ತ್ರ ವಿತರಣಾ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರಕ್ಕೂಮಿಕ್ಕಿ ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆ ಇದ್ದು ಈಗಾಲಗಲೇ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ ಎಂದು ಟ್ರಸ್ಟಿನ ಅಧ್ಯಕ್ಣರಾದ ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಶಾಸಕರ ಸಭಾಭವನದಲ್ಲಿನಡೆದ ಟ್ರಸ್ಟಿನ ಪ್ರಮುಖರ ಸಭೆಯಲ್ಲಿ ಈ ಮಾಹಿತಿ ನೀಡಿದರು.ಸಭೆಯಲ್ಲಿ ಭಾಗವಹಿಸುವ ಎಲ್ಲರಿಗೂ ವಸ್ತ್ರ ವಿತರಣೆ ನಡೆಯಲಿದ್ದು ಅವರ ಜೊತೆ ಸಹಭೋಜನವೂ ನಡೆಯಲಿದೆ. ಗ್ರಾಮ ಗ್ರಾಮಗಳಲ್ಲಿ ಸ್ವಾಗತ ಸಮಿತಿಯನ್ನುರಚಿಸಲಾಗಿದ್ದು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಭಾಗವಹಿಸುವಂತೆ ಶಾಸಕರು ಮನವಿ ಮಾಡಿದರು.
ಸಭೆಯಲ್ಲಿ ಟ್ರಸ್ಟಿನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ.ಪ್ರಮುಖರಾದ ಸುಮಾ ಅಶೋಕ್ ರೈ, ನಿಹಾಲ್ ಶೆಟ್ಟಿ, ರಾಕೇಶ್ ರೈ ಕುದ್ಕಾಡಿ ಮೊದಲಾದವರು ಉಪಸ್ಥಿತರಿದ್ದರು.