ತನ್ನ ಪ್ರಕರಣದ ವಿಚಾರಣೆ ಅಂತ್ಯಗೊಳ್ಳುತ್ತಿದ್ದಂತೆ ನ್ಯಾಯಮೂರ್ತಿ ಮುಂದೆ ತನ್ನ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ

ಬೆಂಗಳೂರು: ವ್ಯಕ್ತಿಯೋರ್ವ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್ ಹಾಲ್ ಸಂಖ್ಯೆ 1ರಲ್ಲಿ ಬುಧವಾರ ಮಧ್ಯಾಹ್ನ ಬ್ಲೇಡ್ ನಿಂದ ತಮ್ಮ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ.

ಕತ್ತು ಕೊಯ್ದು ಕೊಂಡ ವ್ಯಕ್ತಿ ಮೈಸೂರು ಮೂಲದ ಶ್ರೀನಿವಾಸ್ (51) ಚಿನ್ನಮ್ ಆತ್ಮಹತ್ಯೆಗೆ ಯತ್ನಿಸಿದವ ಎಂದು ತಿಳಿದು ಬಂದಿದೆ.
ಶ್ರೀನಿವಾಸ್ ಅವರಿಗೆ ಸಂಬಂಧಿಸಿದ ಪ್ರಕರಣದೊಂದು ಹೈಕೋರ್ಟ್ ಮೆಟ್ಟಿಲೇರಿದೆ. ಇಂದು (ಏ.03) ಪ್ರಕರಣ ವಿಚಾರಣೆ ನಡೆಯುತ್ತಿತ್ತು. ಪ್ರಕರಣದ ವಿಚಾರಣೆ ಅಂತ್ಯಕ್ಕೆ ತಲುಪಿದ್ದಂತೆ ನ್ಯಾಯಮೂರ್ತಿಗಳ ಎದುರು ಬಂದ ಶ್ರೀನಿವಾಸ್ ಅರ್ಜಿಯೊಂದನ್ನು ನ್ಯಾಯಾಲಯದ ಸಿಬ್ಬಂದಿಗೆ ನೀಡಿ, ಬ್ಲೇಡ್ ನಿಂದ ತನ್ನ ಕತ್ತನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಶ್ರೀನಿವಾಸ್ ಅವರನ್ನು ರಕ್ಷಿಸಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಹೈಕೊರ್ಟ್ ನ ಕೇಂದ್ರ ವಿಭಾಗದ ಡಿಸಿಪಿ, ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ಭೇಟಿ ನೀಡಿದ್ದಾರೆ. ವ್ಯಕ್ತಿಯ ಪೂರ್ವಾಪರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.