dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಮಹಿಂದ್ರ ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ತಾಲೂಕಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ.

'; } else { echo "Sorry! You are Blocked from seeing the Ads"; } ?>

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಎಂದು ಗುರುತಿಸಲಾಗಿದೆ.

ಇದೀಗ ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ ಎಂದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!