dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಕರ್ನಾಟಕ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಬಿರುಸಿನಿಂದ ಆರಂಭಗೊಂಡಿದ್ದು, ಸುಸೂತ್ರವಾಗಿ ನಡೆಯುತ್ತಾ ಬರ್ತಿದ್ದು ಆದರೆ ನಮ್ಮ ಮಂಗಳೂರಿನ ಮತಗಟ್ಟೆಯೊಂದರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ರಂಪಾಟ  ನಡೆಸಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ ಬಗ್ಗೆ ವರದಿಯಾಗಿದೆ.

'; } else { echo "Sorry! You are Blocked from seeing the Ads"; } ?>

ನಗರದ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ ಬಳಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಮತ ಚಲಾಯಿಸಲು ಬಂದಾಗ ಈ ಘಟನೆ ನಡೆದಿದ್ದು  ಕಾಂಗ್ರೆಸ್ ಅಭ್ಯರ್ಥಿ ಜೊತೆ ಜನ ಸೇರಿರೋದನ್ನು ಬಿಜೆಪಿ ಕಾರ್ಯಕರ್ತ ಪ್ರಶ್ನಿಸಿದ್ದಾನೆ. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಬಿಜೆಪಿ ಕಾರ್ಯಕರ್ತರ ಸಂದೀಪ್ ಎಕ್ಕೂರು ಹಾಗೂ ಕಾರ್ಯಕರ್ತರಿಂದ ಮಾತಿನ ಚಕಮಕಿ ನಡೆದಿದ್ದು ಅಲ್ಲದೇ ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದ ನಡೆದಿದ್ದು, ಅಧಿಕಾರಿಯನ್ನ ತಳ್ಳಾಡಿ ಪುಂಡಾಟ ಮೆರೆದಿದ್ದಾರೆ ಎಂದು ತಿಳಿದು ಬಂದಿದೆ.ಇತ್ತ ಇದನ್ನು ಚಿತ್ರೀಕರಣ ಮಾಡಿದ ಮಾಧ್ಯಮದವರ ಮೇಲೂ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಕಾನೂನಿನ ಮೇಲೆ ಎಫ್ಐಆರ್ ದಾಖಲು ಮಾಡುಬಹುದೆಂದು ಊಹಿಸಲಾಗಿದೆ.

ಇತ್ತ ಬಿಜೆಪಿ ಕಾರ್ಯಕರ್ತನ ರಂಪಾಟ ನೋಡಿ ನಾಗರಿಕರು ಇದು ಬಿಜೆಪಿಯ ಸೋಲಿನ ಭಯವೋ ಅಥವಾ ಕೈ ಅಭ್ಯರ್ಥಿ ಜೊತೆ ಜನ ಗುಂಪನ್ನು ಕಂಡು ಸಹಿಸಲಾಗದೆ ಈ ರೀತಿ ವರ್ತಿಸುತ್ತಾರೋ ಏನೋ ಒಂದು ಅರ್ಥವಾಗುತ್ತಿಲ್ಲ ಎಂದು ನಾಗರಿಕರು ಆಡಿಕೊಂಡಂತಹ ಸಂಭವ ಕೂಡ ನಡೆಯಿತು.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!