dtvkannada

'; } else { echo "Sorry! You are Blocked from seeing the Ads"; } ?>

ಕೋಲಾರ: ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಗೌರಿಪೇಟೆಯಲ್ಲಿ ನಡೆದಿದೆ. ಕೋಲಾರದ ಯುವತಿ ಉಜಿರೆಯ SDM ಕಾಲೇಜಿನಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದಳು. ತಾನು ಅಂದುಕೊಂಡಂತೆ ಇಂಜಿನಿಯರಿಂಗ್ ಪರೀಕ್ಷೆ ಪಾಸಾಗಿಲ್ಲ ಎಂದು ದುಡುಕಿ ನಿರ್ಧಾರ ತೆಗೆದುಕೊಂಡ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಕೋಲಾರ ನಗರದ ಗೌರಿಪೇಟೆ 3ನೇ ಕ್ರಾಸ್​ನ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಶ್ರೀ ದುಡುಕು ನಿರ್ಧಾರ ಮಾಡಿ ತನ್ನ ಬದುಕಿಗೆ ಅಂತ್ಯ ಹಾಡಿದ್ದಾಳೆ. ಗೌರಿಪೇಟೆ ನಿವಾಸಿ ಉಪನ್ಯಾಸಕ ಗೋಪಿಕೃಷ್ಣ ಅವರಿಗೆ ಇಬ್ಬರು ಮಕ್ಕಳು, ಮೊದಲ ಮಗಳು ಅನುಶ್ರೀ ಉಜಿರೆಯ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೊನೆ ಸೆಮಿಸ್ಟರ್ ಇಂಜಿನಿಯರಿಂಗ್ ಪರೀಕ್ಷೆ ಬರೆದಿದ್ದಳು. ಎರಡು ದಿನಗಳ ಹಿಂದಷ್ಟೇ ಇಂಜಿನಿಯರಿಂಗ್ ಕೊನೆ ಸೆಮಿಸ್ಟರ್​ನ ರಿಸೆಲ್ಟ್ ಬಂದಿತ್ತು. ಅದರಲ್ಲಿ ಮೂರು ವಿಷಯದಲ್ಲಿ ಯುವತಿ ಫೇಲ್ ಆಗಿದ್ದಳು. ಇದನ್ನು ಸಹಿಸದ ಅನುಶ್ರೀ ರಿಸಲ್ಟ್ ಬಂದಾಗಿನಿಂದ ಸಾಕಷ್ಟು ಬೇಸರಗೊಂಡಿದ್ದಳು. ಇದನ್ನು ಗಮನಿಸಿದ ತಂದೆ ಅನುಶ್ರೀಗೆ ಸಾಕಷ್ಟು ಧೈರ್ಯ ಕೂಡ ಹೇಳಿದ್ದರು.

'; } else { echo "Sorry! You are Blocked from seeing the Ads"; } ?>

ಇಂದು ಎಂದಿನಂತೆ ಎಲ್ಲರೂ ತಮ್ಮ ತಮ್ಮ ಕೆಲಸಕ್ಕೆಂದು ಹೊರ ಹೋಗಿದ್ದು, ಮನೆಯಲ್ಲಿ ತನ್ನ ತಾಯಿ, ಅಜ್ಜಿ ಹಾಗೂ ಅನಶ್ರೀ ಇದ್ದರು. ಅಜ್ಜಿ ಅನುಶ್ರೀಗೆ ಕಾಫಿ ತಂದು ಕೊಟ್ಟು ಅಡುಗೆ ಮನೆಗೆ ಹೋಗಿದ್ದಾರೆ. ತಾಯಿ ಸ್ನಾನ ಮಾಡಲು ಹೋಗಿದ್ದಾರೆ. ಅಷ್ಟೇ, ಎರಡೇ ನಿಮಿಷದಲ್ಲಿ ಅನುಶ್ರೀ ಅಲ್ಲೇ ರೂಂನಲ್ಲಿದ್ದ ಪ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ನಾನ ಮುಗಿಸಿ ವಾಪಸ್ಸು ಬಂದ ತಾಯಿ ನೋಡುವಷ್ಟರಲ್ಲಿ ಅಲ್ಲೇ ರೂಂನಲ್ಲಿ ಅನುಶ್ರೀ ಶವ ಪ್ಯಾನ್ಗೆ ನೇತಾಡುತ್ತಿತ್ತು. ತಕ್ಷಣ ಆಕೆಯ ಶವವನ್ನು ಇಳಿಸಿಕೊಂಡು ಪಕ್ಕದಲ್ಲೇ ಇದ್ದ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟೊತ್ತಿಗಾಗಲೆ ಅನುಶ್ರೀ ಪ್ರಾಣ ಪಕ್ಷಿ ಹಾರಿಹೋಗಿತ್ತು.
ಸದ್ಯ ಘಟನೆ ಸಂಬಂಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!