dtvkannada

'; } else { echo "Sorry! You are Blocked from seeing the Ads"; } ?>

ಬಂಟ್ವಾಳ: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಬಾಲಕಿಯನ್ನು ಪುಸಲಾಯಿಸಿ, ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬಂದು ಅತ್ಯಾಚಾರವೆಸಗಿ ಬಳಿಕ ಆಕೆ ಗರ್ಭಿಣಿಯಾದ ವಿಷಯ ತಿಳಿಯುದ್ದಂತೆ ವಿದೇಶಕ್ಕೆ ಪರಾರಿಯಾಗಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ದ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಉಪ್ಪಿನಂಗಡಿ ನಿವಾಸಿ ಮಸೂದ್ ಎಂದು ತಿಳಿದು ಬಂದಿದೆ. ಸಂತ್ರಸ್ತ ಬಾಲಕಿ ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿದ್ದು, ಇದೀಗ ಆಕೆ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದು ಘಟನೆ ಬೆಳಕಿಗೆ ಬಂದಿದೆ.

'; } else { echo "Sorry! You are Blocked from seeing the Ads"; } ?>

ಸಂತ್ರಸ್ತೆ ಬಾಲಕಿಗೆ ಆರೋಪಿ ಮಸೂದ್ ಒಂದು ವರ್ಷದ ಹಿಂದೆ ಸಾಮಾಜಿಕಜಾಲತಾಣದಲ್ಲಿ ಪರಿಚಯವಾಗಿದ್ದು, ಬಳಿಕ ಆತ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿ ಆ ಬಳಿಕ ನಾಪತ್ತೆಯಾಗಿದ್ದಾನೆ.
ಇದೀಗ ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು ಆತನಿಗಾಗಿ ಶೋಧ ಮುಂದುವರಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!