ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ (Nipah virus) ಪತ್ತೆಯಾದ ಬೆನ್ನಲ್ಲೆ ಕರ್ನಾಟಕ ಸರ್ಕಾರ ಎಚ್ಚರಿಕಾ ಕ್ರಮಕ್ಕೆ ಮುಂದಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಅಕ್ಟೋಬರ್ ಅಂತ್ಯದವರೆಗೂ ಆಗಮಿಸದಂತೆ ಸರ್ಕಾರ ಮನವಿಪೂರ್ವಕ ಸೂಚನೆ ನೀಡಿದೆ. ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆಗಳು, ನರ್ಸಿಂಗ್ ಹೋಮ್, ಕಾರ್ಖಾನೆ, ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚನೆ ರವಾನಿಸಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣ ಮುಂದೂಡುವಂತೆ ಸರ್ಕಾರ ತಿಳಿಸಿದೆ.
ರಾಜ್ಯ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದ್ದು, ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಎಂದಿಗಿಂತ ಹೆಚ್ಚು ನಿಗಾ ವಹಿಸಲು ತಿಳಿಸಲಾಗಿದೆ. ಜ್ವರ, ಕೆಮ್ಮು, ಶೀತ ಮೈಕೈ ನೋವು ಕಂಡುಬಂದವರ ಮೇಲೆ ನಿಗಾ ಇಡಿ. ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ಜಾಗೃತಿ ಮೂಡಿಸಿ. ಆನಾರೋಗ್ಯವಿರುವವರ ಸ್ಯಾಂಪಲ್ಸ್ ಸಂಗ್ರಹಿಸುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
In an advisory, Karnataka Govt says people should avoid visiting Kerala till Oct end; asks administrators of educational/nursing/paramedical institutes, owners of hospitals, factories etc to instruct their wards, who haven't returned to Karnataka, to postpone return till Oct end pic.twitter.com/hNdrHJpFbU
— ANI (@ANI) September 7, 2021