ಮುಂಬೈ ಸೆ.8: ಬಾಲಿವುಡ್ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3 ರಂದು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾದಾಗಿನಿಂದ ಆಸ್ಪತ್ರೆಯ ಐಸಿಯು ಘಟಕದಲ್ಲಿರಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.
She was my core. And today I feel an unbearable pain at the very core of my existence. My maa Smt Aruna Bhatia peacefully left this world today morning and got reunited with my dad in the other world. I respect your prayers as I and my family go through this period. Om Shanti 🙏🏻
'; } else { echo "Sorry! You are Blocked from seeing the Ads"; } ?>
ತನ್ನ ಮುಂದಿನ ಸಿನಿಮಾ ಸಿಂಡ್ರೆಲ್ಲಾ ಚಿತ್ರೀಕರಣದ ಪ್ರಯುಕ್ತ ಯುಕೆಯಲ್ಲಿದ್ದ ಅಕ್ಷಯ್ ಕುಮಾರ್ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ತನ್ನ ತಾಯಿ ಜತೆ ಇರಲೆಂದೇ ಇರಲು ಸೋಮವಾರ ಬೆಳಗ್ಗೆ ಮುಂಬೈಗೆ ಮರಳಿದ್ದರು. ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಅಕ್ಷಯ್ ಕುಮಾರ್ ತಾಯಿಯನ್ನು ಹಿರಾನಂದನಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆೇ ಮೃತಪಟ್ಟಿದ್ದಾರೆ.