ಮಂಗಳೂರು,ಸೆ.19: ನಗರದ ಖಾಸಗಿ ಹೊಟೇಲೊಂದರಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ನನ್ನು ನಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
” ಗಾಂಧೀಜಿಯನ್ನು ಹತ್ಯೆ ಮಾಡಲು ಸಾಧ್ಯವಾಗುತ್ತೆ ಎಂದ ಮೇಲೆ ನಿಮ್ಮ ವಿಚಾರದಲ್ಲಿ ಸಾಧ್ಯವಿಲ್ಲ ಅಂತೀರಾ ?” ಎಂದು ಪ್ರಶ್ನಿಸಿ ವಿವಾದ ಹುಟ್ಟು ಹಾಕಿದ್ದ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಸಹಿತ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಇತರರ ಮೇಲೆ ಪ್ರಕರಣ ದಾಖಲಾಗಿದೆ. ಆದರೆ ಅವರ ಬಂಧನ ಇನ್ನೂ ಆಗಿಲ್ಲ ಎಂದು ಹೇಳಲಾಗಿದೆ.
ಇವತ್ತು ಲೈವ್ ವೀಡಿಯೋ ಮೂಲಕ ಹೇಳಿಕೆ ನೀಡಿದ ರಾಜೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ನೀಡಿದ ಹೇಳಿಕೆಯನ್ನು ನಾನು ಬೆಂಬಲಿಸುವೆ. ಅವರ ಸಹಿತ ಹಲವರ ವಿರುದ್ಧ ಬಿಜೆಪಿ ಪ್ರಕರಣ ದಾಖಲಿಸಿರುವುದು ಖಂಡನೀಯ , ಸುದ್ದಿಗೋಷ್ಠಿಯಲ್ಲಿಯೇ ಇಲ್ಲದ ನನ್ನಂತಹ ಹಲವರ ಮೇಲೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ . ಅದಾದ ಕೆಲವೇ ಗಂಟೆಯೊಳಗೆ ರಾಜೇಶ್ ಪವಿತ್ರನ್ ನನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ .