';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕೊಪ್ಪಳ: ನಾಗನಕಲ್ ಗ್ರಾಮದಲ್ಲಿ ದಲಿತ ವ್ಯಕ್ತಿ ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಂಡ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದಂಡ ಹಾಕಿದ ಎಂಟು ಜನರ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ. ಕಾರಟಗಿ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ದೇವಸ್ಥಾನದ ಅರ್ಚಕ ಸೇರಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರಟಗಿ ಪೊಲೀಸರು ಈ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಅಧಿಕಾರಿಗಳು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ನಂತರ ಎಚ್ಚೆತ್ತ ಅಧಿಕಾರಿಗಳು ಎಂಟು ಜನರ ವಿರುದ್ದ ಪ್ರಕರಣ ದಾಖಿಸಿದ್ದಾರೆ. ದೇವಸ್ಥಾನದ ಅರ್ಚಕ ಬಸವರಾಜ್ ಬಡಿಗೇರ್, ರೇವಣಯ್ಯ ಸ್ವಾಮಿ, ಶೇಖಪ್ಪ, ಶರಣಪ್ಪ, ಪ್ರಶಾಂತ್, ಬಸವರಾಜ್, ಕಾಡಪ್ಪ ಹಾಗೂ ದುರಗೇಶ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಸೆಕ್ಷನ್ 504, 149 SC, ST-2005 ಅಡಿಯಲ್ಲಿ ದೂರು ದಾಖಲು ಮಾಡಲಾಗಿದೆ.