';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಶಿರಾಳಕೊಪ್ಪ: ಒಬ್ಬ ಪುರಸಭೆ ಅಧ್ಯಕ್ಷ ರಾಜೀನಾಮೆ ಕೊಡಲು 10 ಬಾರಿ ಯೋಚಿಸುತ್ತಾನೆ. ಆದರೆ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಒತ್ತಡ ಇಲ್ಲದಿರುವಾಗ ರಾಜೀನಾಮೆ ನೀಡಿದ್ದೇನೆ. ಪಕ್ಷದಲ್ಲಿ ಬೇರೆಯವರಿಗೂ ಅವಕಾಶ ಸಿಗಬೇಕು ಎಂಬ ಏಕೈಕ ಉದ್ದೇಶದಿಂದ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ನನ್ನ ರಾಜೀನಾಮೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಆಶ್ಚರ್ಯ ವ್ಯಕ್ತಪಡಿಸಿದ್ದರು. ನನಗೆ ಯಾವುದೇ ಸ್ಥಾನಮಾನವಿಲ್ಲದಿದ್ದರೂ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಪ್ರವಾಸ ಮಾಡಿ ಪಕ್ಷಕ್ಕೆ 140ಕ್ಕಿಂತ ಹೆಚ್ಚು ಸ್ಥಾನವನ್ನು ಕೊಡಿಸುವ ಉದ್ದೇಶ ಹೊಂದಿದ್ದೇನೆ.
ಕೋವಿಡ್ ಇರುವುದರಿಂದ ಪ್ರವಾಸದಲ್ಲಿ ಸಾವಿರಾರು ಜನರು ಸೇರಿ ಅನಾಹುತವಾಗಬಾರದು ಎಂದು ಸುಮ್ಮನಿದ್ದೇನೆ. ಇನ್ನು 15 ದಿನಗಳಲ್ಲಿ ರಾಜ್ಯ ಪ್ರವಾಸ ಮಾಡಲಿದ್ದೇನೆ ಎಂದರು.