';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಹಾಸನ: ಸಕಲೇಶಪುರ ತಾಲೂಕಿನ ಮೂಕನಮನೆ ಜಲಪಾತದಲ್ಲಿ ಈಜುವಾಗ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಜಲಪಾತದಲ್ಲಿ ಆಟ ಆಡುತ್ತಿದ್ದಾಗ ಕಾಲು ಜಾರಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿದ್ದಾನೆ. ವಿದ್ಯಾರ್ಥಿಯನ್ನು ಲಿಂಗರಾಜ್ (18) ಎಂದು ಗುರುತಿಸಲಾಗಿದೆ. ಲಿಂಗರಾಜ್ ಪ್ರಥಮ ವರ್ಷದ ಪ್ಯಾರಾಮೆಡಿಕಲ್ ಓದುತ್ತಿದ್ದ. ಬೆಂಗಳೂರು ಕಾಲೇಜ್’ನಿಂದ ಲಿಂಗರಾಜ್ ಜೊತೆ 25 ಸ್ನೇಹಿತರು ಟಿಟಿ ವಾಹನದಲ್ಲಿ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ.
ವಿದ್ಯಾರ್ಥಿಯ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಕಾರ್ಯಾಚರಣೆ ನಡೆಸಿ ಹೊರತೆಗೆದಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.