ಬೆಂಗಳೂರು: ಜಗತ್ತಿನ ಕಬಡ್ಡಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಬಂದಿದೆ.. 8ನೇ ಆವೃತ್ತಿಯ ಬೆಂಗಳೂರಿನಲ್ಲೇ ನಡೆಯಲಿದೆ ಪ್ರೊ ಕಬಡ್ಡಿ ಲೀಗ್ {Pro Kabaddi League} {ಪಿಕೆಎಲ್} ಡಿಸೆಂಬರ್ 22ರಿಂದ ಆರಂಭಗೊಳ್ಳಲಿದ್ದು, ಇಡೀ ಟೂರ್ನಿಗೆ ಬೆಂಗಳೂರು ಆತಿಥ್ಯ ವಹಿಸಲಿದೆ.
Susvāgata !!!@ProKabaddi https://t.co/07gNSmfmXl
'; } else { echo "Sorry! You are Blocked from seeing the Ads"; } ?>
ಬಹು ನಗರಗಳಲ್ಲಿ ನಡೆಯುತ್ತಿದ್ದ ಟೂರ್ನಿಯನ್ನು ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಇದೇ ಮೊದಲ ಬಾರಿಗೆ ಒಂದೇ ನಗರಕ್ಕೆ ಸೀಮಿತಗೊಳಿಸಲಾಗಿದ್ದು, ಬೆಂಗಳೂರಿನ ಕಂಠೀರವ ಕ್ರಿಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲು ಆಯೋಜಕರು ನಿರ್ಧರಿಸಿದ್ದಾರೆ.
#vivoProKabaddiIsBack pic.twitter.com/2tPAcPHMmP
— ProKabaddi (@ProKabaddi) October 3, 2021
2014ರಲ್ಲಿ ಆರಂಭಗೊಂಡಿದ್ದ ಪ್ರೊ ಕಬಡ್ಡಿ ಲೀಗ್‍ಗೆ ಮೊದಲ ಆವೃತ್ತಿಯಿಂದಲೂ ಬೆಂಗಳೂರು ಆತಿಥ್ಯ ವಹಿಸಿತ್ತು. ಆದರೆ ತಾಂತ್ರಿಕ ಸಮಸ್ಯೆಯಿಂದಾಗಿ 2017, 2018ರಲ್ಲಿ ಬೆಂಗಳೂರಿನಿಂದ ಟೂರ್ನಿ ಎತ್ತಂಗಡಿಯಾಗಿತ್ತು. ಬಳಿಕ 2019ರಲ್ಲಿ ಟೂರ್ನಿಯು ಬೆಂಗಳೂರಿಗೆ ವಾಪಸಾಗಿತ್ತು. ಇದೀಗ ಬೆಂಗಳೂರಿನಲ್ಲೇ ಟೂರ್ನಿ ನಡೆಯಲಿದೆ. ಕೊರೊನಾ ಕಾರಣ 2020ರಲ್ಲಿ ಟೂರ್ನಿ ನಡೆದಿರಲಿಲ್ಲ. ಆದರೆ ಈ ಬಾರಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಪಂದ್ಯಾವಳಿ ಆಯೋಜಿಸಲು ಮುಂದಾಗಿರುವ ಆಯೋಜಕರಾದ ಮಶಾಲ್ ಸ್ಪೊಟ್ರ್ಸ್ ಸಂಸ್ಥೆ, ಕಠಿಣ ಬಯೋ ಬಬಲ್ Bio Bubble) ಸಿದ್ಧಪಡಿಸಿ ಆಟಗಾರರನ್ನು ಉಳಿಸಲು ವ್ಯವಸ್ಥೆ ಮಾಡುವುದಾಗಿ ತಿಳಿಸಿದೆ. ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಕ್ರಿಡಾಂಗಣಕ್ಕೆ ಪ್ರೇಕ್ಷಕರಿಗೆ ಪ್ರವೇಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
🚨 Mark Your Calendars 🚨#vivoProKabaddiIsBack 🔥 pic.twitter.com/c9CBzfzg1h
— ProKabaddi (@ProKabaddi) October 5, 2021
ತಂಡಗಳ ಆಟಗಾರರು ಟೂರ್ನಿ ಆರಂಭಗೊಳ್ಳುವ 14 ದಿನಗಳ ಮೊದಲೇ ಬೆಂಗಳೂರಿಗೆ ಆಗಮಿಸಲಿದ್ದು, ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಟೂರ್ನಿಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ 2 ಡೋಸ್ ಕೊರೊನಾ ಲಸಿಕೆ ಪಡೆದಿರಬೇಕು ಎಂದು ಆಯೋಜಕರು ಷರತ್ತು ವಿಧಿಸಿದ್ದಾರೆ. ದೇಶದ ಅತಿದೊಡ್ಡ ಸ್ಪರ್ಧಾತ್ಮಕ ಟೂರ್ನಿಯನ್ನು ಆಯೋಜಿಸಲು ಬೆಂಗಳೂರಿನಲ್ಲಿ ಸಕಲ ಸೌಲಭ್ಯಗಳು ಇವೆ.
8ನೇ ಆವೃತ್ತಿಯ ಪ್ರೊ ಕಬಡ್ಡಿಯನ್ನು ಯಶಸ್ವಿಯಾಗಿ ಆಯೋಜಿಸುತ್ತೆವೆ ಎಂದು ಮಶಾಲ್ ಸ್ಪೋರ್ಟ್ಸ್‌ನ ಸಿಇಒ ಹಾಗೂ ಲೀಗ್‍ನ ಆಯುಕ್ತ ಅನುಪಮ್ ಗೋಸ್ವಾಮಿ ತಿಳಿಸಿದ್ದಾರೆ. ಟೂರ್ನಿಯನ್ನು ಒಂದೇ ನಗರದಲ್ಲಿ ನಡೆಸಲು ನಿರ್ಧರಿಸಿದಾಗ ಅಹಮದಾಬಾದ್, ಬೆಂಗಳೂರು ಹಾಗೂ ಜೈಪುರ ನಗರಗಳನ್ನು ಗುರುತಿಸಲಾಗಿತ್ತು. ಬಳಿಕ ಎಲ್ಲಾ ರೀತಿಯಲ್ಲೂ ಸೂಕ್ತ ಎನ್ನುವ ಕಾರಣ ಬೆಂಗಳೂರನ್ನು ಅಂತಿಮಗೊಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.