';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಳ್ತಂಗಡಿ: ದ್ವೀಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಪೋಲಿಸ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಮೃತ ಪೋಲಿಸ್ ಕಾನ್‌ಸ್ಟೇಬಲ್ ಅಬೂಬಕ್ಕರ್ ಅವರು ತನ್ನ ಬೈಕ್‌ನಲ್ಲಿ ತೆರಳುತ್ತಿದ್ದಾಗ, ನೇರಳಕಟ್ಟೆ ಎಂಬಲ್ಲಿ ಅವರ ಬೈಕ್‌ಗೆ ಎದುರಿನಿಂದ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದ್ದು. ಡಿಕ್ಕಿಯ ರಭಸಕ್ಕೆ ಅಬೂಬಕ್ಕರ್ ಅವರು ರಸ್ತೆಗೆ ಬಿದ್ದಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆಕ್ಟಿವಾ ಸವಾರ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ಕೈಯ್ಯಬೆ ನಿವಾಸಿ ರಮೇಶ್ ಆಚಾರ್ಯ ರವರ ಪುತ್ರ ದುರ್ಗಾ ಪ್ರಸಾದ್ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ಪುಂಜಾಲಕಟ್ಟೆ ಪೋಲಿಸರು ಆಗಮಿಸಿದ್ದು. ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.