dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ಬೆಂಗಳೂರಿನ ಬಹುತೇಕ ಏರಿಯಾಗಳು ನೀರಿನಿಂದ ಆವೃತವಾಗಿವೆ. ನೆರೆಯ ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಇಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ. ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗಲಿದೆ.

'; } else { echo "Sorry! You are Blocked from seeing the Ads"; } ?>

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಹಾವೇರಿ, ಉತ್ತರ ಕನ್ನಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕಳೆದ ತಿಂಗಳ ಅಂತ್ಯದಿಂದಲೂ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಕೇರಳದ ಕೊಟ್ಟಾಯಂನಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿ 13ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಅವರಲ್ಲಿ ಒಂದೇ ಕುಟುಂಬದ 6 ಜನರು ಸೇರಿದ್ದಾರೆ. ಮಳೆ ಹೆಚ್ಚಾಗಿರುವುದರಿಂದ ಹಲವೆಡೆ ಪ್ರವಾಹದ ಆತಂಕ ಎದುರಾಗಿದ್ದು, ಮನೆಗಳು ಕೊಚ್ಚಿ ಹೋಗಿವೆ. ಮಳೆಯಿಂದ ಸಾಕಷ್ಟು ಆಸ್ತಿ-ಪಾಸ್ತಿಗಳು ನಷ್ಟವಾಗಿವೆ. ವಿಪರೀತ ಮಳೆಯಾಗುತ್ತಿರುವ ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಅಲಪ್ಪುಳ, ಪಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!