ತುಮಕೂರು: ಬಸ್ ಮತ್ತು ಟಾಟಾ ಏಸಿ ಗೂಡ್ಸ್ ವಾಹನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಗೊಲ್ಲಹಳ್ಳಿಯ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಕವಿತಾ(38), ದರ್ಶನ್(22), ದಿವಾಕರ್(25), ಕೃಷ್ಣಮೂರ್ತಿ(25) ಎಂದು ತಿಳಿದು ಬಂದಿದೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಮೃತರು ಮ್ಯಾಕ್ಸಿ ಕ್ಯಾಬ್ನಲ್ಲಿ ತುಮಕೂರಿನ ಮಾರುಕಟ್ಟೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ.
ಮ್ಯಾಕ್ಸಿ ಕ್ಯಾಬ್ನಲ್ಲಿ ತರಕಾರಿ ಹೂಗಳು ತುಂಬಿಕೊಂಡು ಹೋಗುತಿದ್ದರು. ಈ ವೇಳೆ ಖಾಸಗಿ ಬಸ್ ಶಿವಮೊಗ್ಗದಿಂದ ಬೆಂಗಳೂರಿನತ್ತ ಬರುತ್ತಿತ್ತು. ಈ ವೇಳೆ ಎರಡು ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಶವ ತೆರವು ಕಾರ್ಯ ನಡೆಸಿದ್ದಾರೆ.
ಬೆಳಗಿನ ಜಾವ 5.30ರ ಸಮಯದಲ್ಲಿ ಅಪಘಾತ ನಡೆದಿದೆ. ಸ್ಥಳಕ್ಕೆ ತುಮಕೂರು ಎಸ್ ಪಿ ರಾಹುಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಹೊರತೆಗೆಯಲು ಅಗ್ನಿಶಾಮಕದಳ ಸಿಬ್ಬಂದಿಗಳು ಹರಸಾಹಸಪಟ್ಟಿದ್ದಾರೆ.