dtvkannada

'; } else { echo "Sorry! You are Blocked from seeing the Ads"; } ?>

ಚಂಡೀಗಡ: ಜಾತಿ ನಿಂದನೆ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ರೋಹಿತ್ ಶರ್ಮಾ ಜೊತೆಗಿನ ಸಂವಾದದಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಯುವಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಪೊಲೀಸ್ ಠಾಣೆಯಲ್ಲಿ ಯುವರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿರುವ ಹಂಸಿ ಠಾಣಾ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸಿದರು. ಆ ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಔಪಚಾರಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಘಟನೆ ಹಿನ್ನೆಲೆ:
2020ರ ಜೂನ್ನಲ್ಲಿ ರೋಹಿತ್‌ ಶರ್ಮಾ ಜೊತೆಗೆ ಲೈವ್‌ ಚಾಟ್‌ನಲ್ಲಿ ಭಾಗವಹಿಸಿದ್ದ ಯುವರಾಜ್‌, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್‌ ಮತ್ತು ಕುಲ್ದೀಪ್‌ ಯಾದವ್ ಬಗ್ಗೆ ಜಾತಿ ಸೂಚಕ ಪದ ಬಳಸಿದ್ದರು. ಚಹಲ್ ಮಾಡೋ ಟಿಕ್-ಟಾಕ್ ವೀಡಿಯೊ ಬಗ್ಗೆ ಪ್ರಸ್ತಾಪಿಸಿದ್ದ ಯುವಿ , ಈ ಯುಜಿ ಹಾಗೂ ಕುಲ್ದೀಪ್ಗೆ ಬೇರೆ ಕೆಲಸ ಇಲ್ಲ ಎಂದಿದ್ದರು. ಇದೇ ವೇಳೆ ಜಾತಿಯನ್ನು ಪ್ರಸ್ತಾಪಿಸಿ ಹೀಯಾಳಿಸಿದ್ದರು.

'; } else { echo "Sorry! You are Blocked from seeing the Ads"; } ?>

ಈ ವಿಚಾರ ವೈರಲ್ ಆಗುತ್ತಿದ್ದಂತೆ ಯುವರಾಜ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದರು. ಆದರೆ ಈ ಬಗ್ಗೆ ದಲಿತ ಮಾನವ ಹಕ್ಕುಗಳ ವಕೀಲ ಕನ್ವೀನರ್ ರಜತ್ ಕಲ್ಸನ್ ಅವರು ದೂರು ನೀಡಿದ್ದರು. ಅದರಂತೆ ಹರ್ಯಾಣದ ಹಿಸಾರ್‌ನ ಹಂಸಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವರಾಜ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್‌ 153, 153 ಎ, 295, 505 ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!