';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿಯ ಮನೆಯಂಗಳಕ್ಕೆ ಉರುಳಿ ಬಿದ್ದ ಘಟನೆ ಕನ್ಯಾನ ಗ್ರಾಮದ ಪಂಜಾಜೆ ಎಂಬಲ್ಲಿ ನಿನ್ನೆ ನಡೆದಿದೆ.
ಸುಮಾರು 10 ಅಡಿ ಆಳಕ್ಕೆ ಬಿದ್ದ ಪರಿಣಾಮ ಮೂವರು ಗಾಯಗೊಂಡು ಅದೃಷ್ಟವಷಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಂಚಿಯಿಂದ ಕನ್ಯಾನಕ್ಕೆ ಕುಡ್ತಮುಗೇರು ಕುಳಾಲು ಕನ್ಯಾನ ಮಾರ್ಗದಲ್ಲಿ ಆಗಮಿಸುತ್ತಿದ್ದ ಕಾರು ಕನ್ಯಾನ ಗ್ರಾಮದ ಪಂಜಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ರಾಧಾಕೃಷ್ಣ ಕನ್ಯಾನ ಅವರ ಮನೆಯಂಗಳಕ್ಕೆ ಬಿದ್ದಿದ್ದು, ಸುಮಾರು ಹತ್ತು ಅಡಿ ಆಳಕ್ಕೆ ಕಾರು ಬಿದ್ದಿದೆ.
ಘಟನೆಯಲ್ಲಿ ಮೂವರು ಪ್ರಯಾಣಿಕರಿಗೆ ಗಾಯಗಳಾಗಿವೆ.ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಪಕ್ಕದಲ್ಲೇ ಬಾವಿಯಿದ್ದು ಸ್ವಲ್ಪದರಲ್ಲೇ ಭಾರೀ ಅಪಘಾತ ತಪ್ಪಿಹೋಗಿದೆ