dtvkannada

'; } else { echo "Sorry! You are Blocked from seeing the Ads"; } ?>

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕರ್ನಾಟಕದ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ.

ದ್ರಾವಿಡ್ ಅವರು ಮುಖ್ಯ ಕೋಚ್ ಆಗಿ ಆಯ್ಕೆಯಾಗುವುದು ಈ ಹಿಂದೆಯೇ ಬಹುತೇಕ ಖಚಿತವಾಗಿತ್ತು. ಆದರೆ, ಅಧಿಕೃತ ಪ್ರಕ್ರಿಯೆಯ ಭಾಗವಾಗಿ ಬಿಸಿಸಿಐ ಇತ್ತೀಚೆಗೆ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಬಳಿಕ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್‌ಸಿಎ) ಮುಖ್ಯಸ್ಥರೂ ಆಗಿರುವ ರಾಹುಲ್ ದ್ರಾವಿಡ್ ಅರ್ಜಿ ಸಲ್ಲಿಸಿದ್ದರು.

'; } else { echo "Sorry! You are Blocked from seeing the Ads"; } ?>

ಐಸಿಸಿ ಟ್ವೆಂಟಿ–20 ವಿಶ್ವಕಪ್ ಟೂರ್ನಿಯೊಂದಿಗೆ ಮುಖ್ಯ ಕೋಚ್ ಆಗಿ ರವಿ ಶಾಸ್ತ್ರಿ ಅವಧಿ ಮುಕ್ತಾಯಗೊಳ್ಳಲಿದೆ. ನವೆಂಬರ್‌ನಲ್ಲಿ ಭಾರತದಲ್ಲಿ ನ್ಯೂಜಿಲೆಂಡ್ ವಿರುದ್ಧ ಸರಣಿ ನಡೆಯಲಿದ್ದು, ಕೋಚ್ ಆಗಿ ದ್ರಾವಿಡ್ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ. ದ್ರಾವಿಡ್ ಅವರು 1996ರಿಂದ 2012ರ ಅವಧಿಯಲ್ಲಿ ಭಾರತ ತಂಡದ ಪರ 164 ಟೆಸ್ಟ್, 344 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

View this post on Instagram

A post shared by Team India (@indiancricketteam)

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!