';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಅನಂತಪುರ: ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋವೊಂದಕ್ಕೆ ವೇಗವಾಗಿ ಬಂದ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಅನಂತಪುರದ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಪಾಮಿಡಿ ಮಂಡಲದ ಬಳಿ ಸಂಭವಿಸಿದೆ.
ಆಟೋದಲ್ಲಿ ಕೃಷಿ ಕಾರ್ಮಿಕರು ಹೆಚ್ಚಾಗಿ ಮಹಿಳೆಯರೇ ಪ್ರಯಾಣಿಸುತ್ತಿದ್ದರು. ವೇಗವಾಗಿ ಬಂದ ಲಾರಿ ಆಟೋಗೆ ಢಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಅನಂತಪುರದ ಪಾಮಿಡಿ ಮಂಡಲ ಸಮೀಪದ ಕೊಪ್ಪಲ್ಲಕೊಂಡ ಗ್ರಾಮದವರು ಎಂದು ತಿಳಿದು ಬಂದಿದೆ.
ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಏತನ್ಮಧ್ಯೆ, ಗಾಯಗೊಂಡ ಅನೇಕ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ.