';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕಡಬ: ಮೈ ಮೇಲೆ ಬಿಸಿ ನೀರು ಬಿದ್ದು ಗಂಭೀರ ಗಾಯಗೊಂಡಿದ್ದ ಸವಣೂರಿನ ಮಹಿಳೆ ಸವಣೂರು ಗ್ರಾಮದ ಮಾಂತೂರು ನಿವಾಸಿ ಕುಂಞಾಲಿಮ್ಮ (60) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕುಂಞಾಲಿಮ್ಮ ಒಂದೂವರೆ ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ನ.15ರಂದು ಸ್ನಾನ ಮಾಡಲು ಒಲೆಯಲ್ಲಿ ಬಿಸಿ ನೀರು ಕಾಯಿಸಿ ಬಳಿಕ ಬಚ್ಚಲು ಕೋಣೆಗೆ ಒಯ್ಯುತ್ತಿದ್ದಾಗ ಪಾತ್ರೆ ಕೈ ಹಿಡಿತದಿಂದ ಜಾರಿ ಕೆಳಗೆ ಬಿದ್ದು ಸುಟ್ಟ ಗಾಯಗಳಾಗಿತ್ತು.ಮೊದಲು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.