ಸಫಾರಿಗೆ ತೆರಳಿದ ವಿದ್ಯಾರ್ಥಿಗಳ ಮೇಲೆ ಆನೆ ದಾಳಿ ಮಾಡಿದ್ದು, ಭಯಭೀತರಾದ ವಿದ್ಯಾರ್ಥಿಗಳು ಪ್ರಾಣ ರಕ್ಷಣೆಗಾಗಿ ಸಫಾರಿ ವಾಹನದಿಂದ ಇಳಿದು ಓಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಕ್ಷಿಣ ಆಫ್ರಿಕಾದ ಲಿಂಪೊಪೊ ಪ್ರಾಂತ್ಯದ ಗ್ಲೋವೆಲೆಟ್ ಮತ್ತು ಫಲಬೋರ್ವಾ ಪಟ್ಟಣಗಳ ನಡುವೆ ಇರುವ ವನ್ಯಜೀವಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆನೆಗಳ ಸಂತಾನೋತ್ಪತ್ತಿ ಪ್ರಕ್ರಿಯೆ ಬಗ್ಗೆ ತಿಳಿಯಲು ಬಂದ ವಿದ್ಯಾರ್ಥಿಗಳ ಮೇಲೆ ಆನೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಈ ವಿಡಿಯೋದಲ್ಲಿ ಕೆಲವು ವಿದ್ಯಾರ್ಥಿಗಳು ತಮ್ಮ ಜೀವ ಉಳಿಸಿಕೊಳ್ಳಲು ತಮ್ಮ ಬಳಿ ಇದ್ದ ವಸ್ತುಗಳನ್ನು ಬಿಟ್ಟು ಓಡಿರುವುದು ಸೆರೆಯಾಗಿದೆ. ಸಂತಾನೊತ್ಪತ್ತಿ ಹಂತದಲ್ಲಿರುವಾಗ ಸಫಾರಿ ವಾಹನದ ಸದ್ದು ಕೇಳಿದ್ದರಿಂದ ಹೆಚ್ಚು ಕೋಪಗೊಂಡು ದಾಳಿ ಮಾಡಿದೆ ಎಂದು ವಿಡಿಯೋ ನೋಡಿದ ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.
https://youtu.be/XwyXemdEBPk
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆಯಿಂದ ಸಫಾರಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಆನೆಯ ದಾಳಿಯಿಂದ ಯಾರಿಗೂ ಗಾಯಗಳಾಗಿಲ್ಲ ಎನ್ನುವುದು ಸಮಾಧಾನ ತಂದಿದೆ.