';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬಾಳೆಹೊನ್ನೂರು: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಆಸ್ಪತ್ರೆಗೆ ಮೃತರ ಸಂಬಂಧಿಕರು, ಸಾರ್ವಜನಿಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವನಗರ ಶ್ವೇತಾ (27) ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ವೈದ್ಯರು ಸ್ವಾಭಾವಿಕ ಹೆರಿಗೆ ಆಗುತ್ತದೆ ಎಂದು ಸಮಯ ದೂಡಿದ ಕಾರಣ ಹಾಗೂ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದ ಕಾರಣ ಗರ್ಭಿಣಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಾಧಿಕಾರಿ ಎಲ್ಡೋಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಈ ವೇಳೆ ಪೊಲೀಸ್ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಕೂಡ ಮೃತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಒತ್ತಾಯಿಸಿದ್ದಾರೆ.