ಮಂಗಳೂರು: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರ ಸಂಬಂಧಿಸಿದಂತೆ ಮಾಧ್ಯಮಗಳು ತನ್ನ ಹೇಳಿಕೆಯನ್ನು ತಿರುಚಿದ್ದಾರೆ ಎಂದು ಉಡುಪಿ ಪೇಜಾವರಶ್ರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಾಸ್ತವದಲ್ಲಿ ನನ್ನ ಅಭಿಪ್ರಾಯ ಪಡೆಯುವ ವೇಳೆ ನಮಗೆ ನೀಡಿದ ಮಾಹಿತಿಯೇ ತಪ್ಪು, ಶಾಲೆಯಲ್ಲಿ ಸಾಮೂಹಿಕವಾಗಿ ಎಲ್ಲರಿಗೂ ಮೊಟ್ಟೆ ವಿತರಿಸಲಾಗುತ್ತಿದೆ ಈ ಬಗ್ಗೆ ಈ ಬಗ್ಗೆ ನನ್ನ ಅಭಿಪ್ರಾಯ ಕೇಳಲಾಗಿತ್ತು.
ಇದಕ್ಕೆ ಸಹಜವಾಗಿ ಹೇಳಿದ್ದು ಆಹಾರದ ಹಕ್ಕು, ಸ್ವಾತಂತ್ರ್ಯ ಎಲ್ಲರಿಗೂ ಇದೆ. ಸಸ್ಯಹಾರಿಗಳಿಗೆ ಮೊಟ್ಟೆ ತಿನ್ನಿಸುವ ಕೆಲಸ ಅಗಬಾರದು ಮತ್ತು ಶಾಲೆಯಲ್ಲಿ ಕೆಲವರಿಗೆ ಮೊಟ್ಟೆ ವಿತರಣೆ, ಕೆಲವರಿಗೆ ನೀಡದಿರುವುದು ಮತಬೇಧಕ್ಕೆ ಕಾರಣವಾಗುತ್ತೆ.
ಹೀಗಾಗಿ ಶಾಲೆಯಲ್ಲಿ ಸಾಮೂಹಿಕವಾಗಿ ಮೊಟ್ಟೆ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದೆ. ಆಮೇಲೆ ತಿಳಿದದ್ದು, ಶಾಲೆಯಲ್ಲಿ ಮೊಟ್ಟೆ ತಿನ್ನುವವರಿಗೆ ಮೊಟ್ಟೆ ಕೊಡುತ್ತಾರೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡುತ್ತಾರೆ. ಈ ವಿಚಾರ ನಮಗೆ ತಿಳಿಸದೆ ಮೊಟ್ಟೆ ಹಂಚುವ ಕುರಿತು ಅಭಿಪ್ರಾಯವೇನು ಅಂಬ ಅರ್ಧ ಸತ್ಯ ಕೇಳಲಾಗಿದೆ.
ಸಮಾಜದ ಮುಂದೆ ನಮ್ಮ ಅಭಿಪ್ರಾಯ ಮುಂದಿಟ್ಟು ಶಾಲೆಯಲ್ಲಿ ಬಡ, ಆಶಕ್ತ, ದುರ್ಬಳ ಮಕ್ಕಳಿಗೆ ಮೊಟ್ಟೆ ಕೊಡುವುದನ್ನ ವಿರೋದಿಸುತ್ತಿದ್ದಾರೆ. ತಮ್ಮ ಅಭಿಪ್ರಾಯ ಏನು ಎಂದು ಜನಾಭಿಪ್ರಾಯ ಕೇಳುವ ಮೂಲಕ ಒಂದು ಸಮೂಹವನ್ನ ಎತ್ತಿಕಟ್ಟುವ ಕೆಲಸ ನಡೆದಿದೆ.
ಮಾಧ್ಯಮಗಳು ಸಮಾಜದ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಹೊರಬೇಕು ಸಮಾಜದ ಸ್ವಾಸ್ಥ್ಯ ಹಾಳುಮಾಡುವ ದುಸ್ಸಾಹಸಕ್ಕೆ ಕೈಹಾಕಬಾರದು. ಇದನ್ನ ನಾನು ಖಂಡಿಸುತ್ತೇನೆ ಎಂದಿದ್ದಾರೆ.