ತಿರುವನಂತಪುರಂ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕೇರಳ ರಾಜ್ಯ ಕಾರ್ಯದರ್ಶಿ ಕೆ.ಎಸ್ ಶಾನ್ ಎಂಬವರ ಮೇಲೆ ತಂಡವೊಂದು ಮಾರಣಾಂತಿಕ ದಾಳಿ ನಡೆಸಿ ಕೊಲೆ ಮಾಡಿದ ಘಟನೆ ಆಲಪ್ಫುಝ ಮನ್ನಂಚೇರಿಯಲ್ಲಿ ನಡೆದಿದೆ.
ಎಸ್ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯ ಕೆ.ಎಸ್ ಶಾನ್ ರವರು ಡಿ.18ರ ರಾತ್ರಿ ಮಣ್ಣಂಚೇರಿ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ದುಷ್ಕರ್ಮಿಗಳು ಅಪಘಾತವೆಸಗಿ, ನಂತರ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿದ್ದಾರೆ.
ರಾತ್ರಿ 8.30 ರ ಸುಮಾರಿಗೆ ಶಾನ್ ಅವರು ತನ್ನ ಬೈಕಿನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಬೈಕ್ ಗೆ ವಾಹನ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದಾಗ ಆರ್ ಎಸ್ ಎಸ್ ಕಾರ್ಯಕರ್ತರು ಅವರ ಮೇಲೆ ಏಕಾಏಕಿ ಮಾರಕಾಯುಧ ದಿಂದ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಪರಿಣಾಮ ಅವರ ತಲೆ ಕೈಕಾಲು ಸೇರಿದಂತೆ ದೇಹದ ಹಲವೆಡೆ ಗಂಭೀರ ಗಾಯಗಳಾಗಿವೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ರಾಜ್ಯ ಕಾರ್ಯದರ್ಶಿಯ ಕೊಲೆಯನ್ನು ಖಂಡಿಸಿ ಕೇರಳ sdpi ಕಾರ್ಯಕರ್ತರು ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.